ಮಡಿಕೇರಿ ಜ.2 : ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲಾ ಬಾಲ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿನಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶಾಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜ್ ಸನ್ಮಾನಿಸಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023 ರಲ್ಲಿ “ಕಲುಷಿತಗೊಳ್ಳುತ್ತಿರುವ ನದಿ ತೀರಗಳು” ಎಂಬ ವಿಷಯದ ಕುರಿತು ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿದ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾಳಿಗೆ ಶುಭ ಹಾರೈಸಿದ ಸಚಿವರು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ದೇಶದ ಪ್ರಗತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಮಕ್ಕಳ ವಿಜ್ಞಾನ ಸಮಾವೇಶದ ಮಹತ್ವ ಕುರಿತು ಮಾಹಿತಿ ನೀಡಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಸಮಾವೇಶದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಮಕ್ಕಳ ವಿಜ್ಞಾನ ಸಮಾವೇಶವು ವಿದ್ಯಾರ್ಥಿಗಳನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಒದಗಿಸುತ್ತಿದೆ.ಜಿಲ್ಲೆಯ ವಿದ್ಯಾರ್ಥಿಗಳು ಹಲವು ಬಾರಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಯವರ ಕಾನೂನು ಸಲಹೆಗಾರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಡಿಸಿ ವೆಂಕಟ್‍ರಾಜಾ, ಎಸ್.ಪಿ.ರಾಮರಾಜನ್, ಡಿಡಿಪಿಐ ಎಂ.ಚಂದ್ರಕಾಂತ್, ಬಾಲ ವಿಜ್ಞಾನಿಯ ಮಾರ್ಗದರ್ಶಿ ಶಿಕ್ಷಕಿ ಶೋಭಾ, ವಿದ್ಯಾರ್ಥಿನಿಯ ಪೋಷಕರಾದ ಸಂಧ್ಯಾ ಮತ್ತು ಶ್ರೀಜಾ ಇದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*