ಸುಂಟಿಕೊಪ್ಪ ಜ.3 : ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ಕೊಡಗು ಜಿಲ್ಲಾ ಅಕ್ಷರ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳ 4 ರಿಂದ 6ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಗ್ರಾ.ಪಂ ಮಟ್ಟದ ಗಣಿತ ಸ್ಪರ್ಧೆ ನಡೆಯಿತು.
ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ ಕುಮಾರ್ ಅವರು ವಹಿಸಿದ್ದರು.
ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ಉಪಾಧ್ಯಕ್ಷರಾದ ಶಿವಮ್ಮ ಮಹೇಶ್, ಸದಸ್ಯರಾದ ಹೆಚ್.ಯು. ರಫೀಕ್ ಖಾನ್, ಐ. ಸೋಮನಾಥ್, ಎ. ಶಬೀರ್, ಕೆ.ಕೆ. ಪ್ರಸಾದ್, ಕೆ.ಎಂ. ಆಲಿಕುಟ್ಟಿ, ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೀತಾ, ಗದ್ದೆಹಳ್ಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಹೇಮಕುಮಾರಿ ಹಾಗೂ ಶಿಕ್ಷಕಿಯರು ಹಾಗೂ ಇತರರು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳಾದ ವಿ.ಜಿ. ಲೋಕೇಶ್ ಅವರು ಸ್ವಾಗತಿಸಿ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಹಂಸಿಕಾ ಉದಯ ಮತ್ತು ಭುವನೇಶ್ವರಿ ಪ್ರಾರ್ಥಿಸಿದರು.
ಫಲಿತಾಂಶ:
4ನೇ ತರಗತಿ ವಿಭಾಗದಲ್ಲಿ ಪ್ರಥಮ : ಆರ್.ತಪ್ಸೀರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗದ್ದೆಹಳ್ಳ, ರಿಫಾ ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಫಾತೀಮ ದ್ವಿತೀಯ, ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಫ್ರೀದ್ ಮತ್ತು ಅರ್ಷಕ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
5ನೇ ತರಗತಿ ವಿಭಾಗದಲ್ಲಿ : ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರ್.ಕೌಶಲ್ಯ ಪರಥಮ, ದ್ವೀತಿಯ : ಹಂಸಿಕಾ ಯು. ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸುಂಟಿಕೊಪ್ಪ, ತೃತೀಯ : ರಕ್ಷಾ ಹೆಚ್.ಎ. ಮತ್ತು ಈಶ್ವರಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸುಂಟಿಕೊಪ್ಪ, ಜಸ್ಮೀತಾ ಎಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗದ್ದೆಹಳ್ಳ
6ನೇ ತರಗತಿ ವಿಭಾಗದಲ್ಲಿ ಪ್ರಥಮ : ಲಕ್ಷ್ಮಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸುಂಟಿಕೊಪ್ಪ, ದ್ವಿತೀಯ : ಆಯಿಶಾ ಎಸ್.ಎ.ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸುಂಟಿಕೊಪ್ಪ, ತೃತೀಯ : ಅಯಿಶುತುಲ್ಲಾ ಮಸೂದಾ ಎ. ಮತ್ತು ರಿದಾ ಫಾತೀಮ ಬಿ.ಆರ್. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಂಟಿಕೊಪ್ಪ ಇವರುಗಳು ಬಹುಮಾನಗಳನ್ನು ಪಡೆದುಕೊಂಡರು.