ಮಡಿಕೇರಿ ಜ.3 : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನವೋದಯ ವಿದ್ಯಾಲಯದಲ್ಲಿ ನಡೆದ 2023-24 ನೇ ಸಾಲಿನ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಗೋಣಿಕೊಪ್ಪಲಿನ ಕಳತ್ಮಾಡು ಲಯನ್ಸ್ ಪ್ರೌಢ ಶಾಲಾ ವಿದ್ಯಾರ್ಥಿಗಳು ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ 8ನೇ ತರಗರಿ ವಿದ್ಯಾರ್ಥಿ ಡೆರಿನ್ ಬ್ರೌನ್ ಸೈಮನ್, 9ನೇ ತರಗತಿ ವಿದ್ಯಾರ್ಥಿ ಶ್ವೇತನ್ ಜಿ.ರೈ ಭಾಗವಹಿಸಿ, ಜ.27 ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಲಯನ್ಸ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.