ಮಡಿಕೇರಿ ಜ.3 : ಕಾಡಾನೆ ದಾಳಿಯಿಂದ ಗಾಂಭೀರವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ಮಹಿಳೆಯ ಆರೋಗ್ಯವನ್ನು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿಚಾರಿಸಿದರು.
ನಗರದ ಜಿಲ್ಲಾಸ್ಪತ್ರೆಗೆ ಆಗಮಿಸಿದ ಪೊನ್ನಣ್ಣ ಅವರು, ವೈದ್ಯರಿಂದ ಮಹಿಳೆಯ ಆರೋಗ್ಯ ಸ್ಥಿತಿಯ ಕುರಿತು ಹಾಗೂ ಗಾಯಾಳು ಪಲ್ಲವಿ ಪತಿಯಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಕುಟುಂಬಕ್ಕೆ ಸ್ಥೈರ್ಯ ತುಂಬಿದರು. ಉನ್ನತ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದರು.
ಈ ಸಂದರ್ಭ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಹಾಜರಿದ್ದರು.








