ಮಡಿಕೇರಿ ಜ.4 : ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಗ್ರಾಮ ಸಭೆಯು ಜ.6 ರಂದು ಗ್ರಾ.ಪಂ ಅಧ್ಯಕ್ಷರಾದ ಮಂಜುಳಾ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಂದು ಪೂರ್ವಾಹ್ನ 11 ಗಂಟೆಗೆ ವಾಲ್ನೂರು ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ನೋಡಲ್ ಅಧಿಕಾರಿಯಾಗಿ ಚೆಟ್ಟಳ್ಳಿ ಪಶು ವೈದ್ಯಾಧಿಕಾರಿ ಡಾ.ಸಂಜೀವ್ ಕುಮಾರ್ ಆರ್.ಸಿಂದೆ ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಭಾಗವಹಿಸಲಿದ್ದು, ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಗ್ರಾಮಸ್ಥರು, ಮಹಿಳೆಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದೆ.










