ಮಡಿಕೇರಿ ಜ.4 : ನಗರದ ಗಾಂಧಿ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರಪಿತ ಮಹಾತ್ಮ ‘ಗಾಂಧೀಜಿಯವರ ಸ್ಮಾರಕ ಉದ್ಯಾನವನ’ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಪರಿಶೀಲಿಸಿದರು.
ಆದಷ್ಟು ಶೀಘ್ರ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವರು ನಿರ್ದೇಶನ ನೀಡಿದರು.
ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ 50 ಲಕ್ಷ ರೂ. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ ಸಹ 5 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭ ಭರವಸೆ ನೀಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಕಾಮಗಾರಿ ತ್ವರಿತವಾಗಿ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು.
ಶಾಸಕರ ಅನುದಾನದಡಿ ಸಾಧ್ಯವಾದಷ್ಟು 10 ಲಕ್ಷ ರೂ. ವರೆಗೆ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಅನುದಾನ ಒದಗಿಸುವುದರ ಜೊತೆಗೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಬೇಕೆಂದು ಕೋರಿದರು.
ಗಾಂಧಿ ಸ್ಮಾರಕ ಉದ್ಯಾನವನವನ್ನು ರಾಜ್ಘಾಟ್ ಮಾದರಿಯಲ್ಲಿ ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ ಆಕರ್ಷಣೀಯ ಕೇಂದ್ರವಾಗಿ ‘ಗಾಂಧಿ ಸ್ಮಾರಕ ಉದ್ಯಾನವನ್ನು’ ಮಾದರಿಯಾಗಿ ನಿರ್ಮಿಸಬೇಕು ಎಂದು ಟಿ.ಪಿ.ರಮೇಶ್ ಅವರು ಕೋರಿದರು.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಮಹಾತ್ಮ ಗಾಂಧಿ ಸ್ಮಾರಕ ಉದ್ಯಾನವನ ಸಂಬಂಧಿಸಿದಂತೆ ನೀಲನಕಾಶೆ ಬಗ್ಗೆ ಮಾಹಿತಿ ನೀಡಿದರು.
ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಸರ್ವೋದಯ ಸಮಿತಿ ಸದಸ್ಯರಾದ ಮುನೀರ್ ಅಹಮದ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಪ್ರಮುಖರಾದ ಕಾರ್ಯಪ್ಪ ಇತರರು ಇದ್ದರು.
Breaking News
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*
- *ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
- *ಸುಂಟಿಕೊಪ್ಪ : ಸ್ವರ್ಣಾಲಯದಲ್ಲಿ ಗಾಂಧಿ ಸ್ಮರಣೆ*
- *ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಕೆ.ಎಸ್.ಮೂರ್ತಿ ಆಯ್ಕೆ*
- *ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಸಿ.ಎಂ.ಚಿಣ್ಣಪ್ಪ ಆಯ್ಕೆ*
- *ತೀರ್ಪುಗಾರರಾಗಿ ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕ*
- *ಭಾಗಮಂಡಲ ಮೇಲ್ಸೇತುವೆಗೆ ಕೆದಂಬಾಡಿ ರಾಮಯ್ಯ ಗೌಡರ ಹೆಸರಿಡಲು ಮನವಿ*
- *ಹಿಂದು ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯಲ್ಲಿ ಜಾಗೃತಿ ಬೈಕ್ ಜಾಥಾ*
- *ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ : ನೂತನ ರಾಜಗೋಪುರ ಉದ್ಘಾಟನೆ*