ಮಡಿಕೇರಿ ಜ.4 :NEWS DESK ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಭಾಗಮಂಡಲ ಮೇಲು ಸೇತುವೆ ಕಾಮಗಾರಿಯನ್ನು ಈ ತಿಂಗಳಾಂತ್ಯಕ್ಕೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಮುಂದಿನ ತಿಂಗಳ ಮೊದಲ ವಾರ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಳ್ಳುವಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
ಕುಶಾಲನಗರ ಕಾವೇರಿ ನೀರಾವರಿ ನಿಗಮ ಅಧೀಕ್ಷಕ ಅಭಿಯಂತರರ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.
ಮುಂದಿನ ತಿಂಗಳು ಮಡಿಕೇರಿಯಲ್ಲಿ ಸರ್ಕಾರದ ಉಚಿತ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಭಾಗಮಂಡಲದ ಸೇತುವೆ ಉದ್ಘಾಟನೆಗೊಳ್ಳಲಿದೆ ಎಂದರು.
ಆಡಳಿತಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವ ಬೋಸರಾಜು ಭರವಸೆ ನೀಡಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ ಸಿಇಒ ವರ್ಣಿತ್ ನೇಗಿ, ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ, ಸರ್ಕಾರದಿಂದ ನೂತನವಾಗಿ ನೇಮಕವಾದ ತಾಲ್ಲೂಕು ಉಸ್ತುವಾರಿ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Breaking News
- *ಗಾಂಧಿ ವಿಚಾರಧಾರೆಗಳು, ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಮಡಿಕೇರಿ : ಡಾ.ದೇವದಾಸ್ಗೆ ಶಾಸಕರಿಂದ ಸನ್ಮಾನ*
- *ಮಡಿಕೇರಿ ಕೊಡವ ಸಮಾಜದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮದಿನಾಚರಣೆ*
- *ಕೊಡಗು ಎಸ್ಪಿ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ*
- *ಬಿ.ಎ.ಆದಿಲ್ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಟ್ರೋಫಿ*
- *ಅರ್ಚಕ ವಿಘ್ನೇಶ್ ಭಟ್ ಆರೋಗ್ಯ ವಿಚಾರಿಸಿದ ಶಾಸಕ ಎ.ಎಸ್.ಪೊನ್ನಣ್ಣ*
- *ಮಡಿಕೇರಿಯಲ್ಲಿ ‘ಹುತಾತ್ಮರ ದಿನಾಚರಣೆ’ : ಮಹಾತ್ಮ ಗಾಂಧಿ ಸ್ಮರಣೆ*
- *ಮಡಿಕೇರಿಯಲ್ಲಿ ಹುತಾತ್ಮರ ದಿನಾಚರಣೆ : ಮಹಾತ್ಮ ಗಾಂಧಿ ಸ್ಮರಣೆ*
- *ಚೆಯ್ಯಡಾಂಣೆಯಲ್ಲಿ ಪಿಂಚಣಿ ಆದಲತ್ : ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪ್ರತಿ ಹಸ್ತಾಂತರ*
- *ಸ್ಪ್ರಿಂಕ್ಲರ್ ಗೆ ಶೇ.90 ರಷ್ಟು ಸಹಾಯಧನ*