ಸಿದ್ದಾಪುರ ಜ.5 : ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಹೆಚ್.ಎಂ.ಲೋಕೇಶ್ ಅವರನ್ನು ಶಿಕ್ಷಣ ಸಂಸ್ಥೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಶಾಲೆಯ ಸಭಾಂಗಣದಲ್ಲಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕ ವೃಂದ, ಸಿಬ್ಬಂದಿಗಳು ಫಲ-ತಾಂಬೂಲ ನೀಡಿ ಶಾಲು ಹೊದಿಸಿ ಸನ್ಮಾನಿಸಿ, ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಭಾರತಿ ನಿರೂಪಿಸಿ, ಶಶಿಕುಮಾರ್ ಸ್ವಾಗತಿಸಿ, ಆಶಾ ಪ್ರಾರ್ಥಿಸಿದರು.









