Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ*

ಜನವರಿ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಬೆಂಗಳೂರು ಜ 5 : ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಮಹತ್ವದ ಘೋಷಣೆ ಮಾಡಿದರು.
ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಘೋಷಿಸಿದರು.
ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.
ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.
ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ ಎಂದರು.
2004 ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಭನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು.
ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್,  ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.