ಮಡಿಕೇರಿ ಜ.5 : ಆರನೇ ತರಗತಿಗೆ ಪ್ರವೇಶಕ್ಕೆ ಜನವರಿ, 20 ರಂದು ಕೊಡಗು ಜಿಲ್ಲೆಯ ಆರು ಕೇಂದ್ರಗಳಲ್ಲಿ ನಡೆಯಲಿರುವ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ನೋದಾಯಿತ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ನವೋದಯ ವಿದ್ಯಾಲಯ ಸಮಿತಿಯು ತನ್ನ ಅಧಿಕೃತ ವೆಬ್‍ಸೈಟಿನಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿ https:/navodaya.gov.in ಈ ಸೈಟಿನಿಂದ ನೇರವಾಗಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೋಳ್ಳಲು ಸಾಧ್ಯವಾಗದ ಅಭ್ಯರ್ಥಿಗಳು ತಮ್ಮ ಮಗ ಮಗಳು ಓದುತ್ತಿರುವ ಶಾಲೆ ಅಥವಾ ನವೋದಯ ವಿದ್ಯಾಲಯವನ್ನು ಸಂಪರ್ಕಿಸಬಹುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಒ.ಎಂ. ಪಂಕಜಾಕ್ಷನ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9611862835, 8840383521 ಸಂಪರ್ಕಿಸಬಹುದು.









