ಮಡಿಕೇರಿ ಜ.6 : ಪೊನ್ನಂಪೇಟೆ ತಾಲ್ಲೂಕಿನ ಜನ ಸ್ಪಂದನ ಸಭೆಯು ಜ.9 ರಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ದ.ಕೊಡಗಿನ ಟಿ.ಶೆಟ್ಟಿಗೇರಿಯ ಕೊಡವ ಸಮಾಜದಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.