Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಖೋಖೋ ಪಂದ್ಯಾವಳಿ : ತಂತ್ರಜ್ಞಾನದ ಬಳಕೆ ಕ್ರೀಡಾ ಕ್ಷೇತ್ರದ ಉನ್ನತಿಗೆ ಸಹಕಾರಿ : ರವಿಶಂಕರ್ ಅಭಿಮತ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಖೋಖೋ ಪಂದ್ಯಾವಳಿ : ತಂತ್ರಜ್ಞಾನದ ಬಳಕೆ ಕ್ರೀಡಾ ಕ್ಷೇತ್ರದ ಉನ್ನತಿಗೆ ಸಹಕಾರಿ : ರವಿಶಂಕರ್ ಅಭಿಮತ

ಜನವರಿ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಜ.6 : ತಂತ್ರಜ್ಞಾನಗಳು ಬದಲಾದಂತೆ ಕ್ರೀಡಾ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ. ಮ್ಯಾಟ್ ಅಂಕಣಗಳು, ನಿಖರ ಫಲಿತಾಂಶವನ್ನು ನೀಡಬಲ್ಲ ಎಲೆಕ್ಟ್ರಾನಿಕ್ ತಂತ್ರಜ್ಞಾನಗಳು ಬಳಕೆಯಾಗುತ್ತಿದ್ದು, ಕ್ರೀಡಾ ಕ್ಷೇತ್ರದ ಉನ್ನತಿಗೆ ಸಹಕಾರಿಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋಖೋ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಆಟವನ್ನು ಕ್ರೀಡಾಸ್ಫೂರ್ತಿಯಿಂದ ಆಡಬೇಕು ಮತ್ತು ಅಲ್ಲಿನ ಘಟನೆಗಳನ್ನು ಕ್ರೀಡಾಂಗಣದಿಂದ ಹೊರ ಹೋಗುವಾಗ ಮರೆತುಬಿಡಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಕ್ರೀಡೆಗಳು ನಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ದೈಹಿಕ ಸ್ಥಿರತೆಯನ್ನು ನೀಡುವಲ್ಲಿ ಸಹಕಾರಿಯಾಗಿದೆ. ತನ್ಮೂಲಕ ಶಾರೀರಿಕ ದೃಡತೆ ಮತ್ತು ಆತ್ಮವಿಶ್ವಾಸವನ್ನು ಇದು ಹೆಚ್ಚಿಸುತ್ತದೆ ಎಂದರು. ಕಾಲೇಜು ಪಾಠದ ಜತೆಗೆ ಪಠ್ಯೇತರ ವಿಷಯಗಳಿಗೂ ಸಮಾನ ಅವಕಾಶವನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಖೋಖೋ ಕ್ರೀಡಾಕೂಟದಲ್ಲಿ ಕಂಚಿನ ಪದಕವನ್ನು ಪಡೆದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಖೋಖೋ ಆಟಗಾರ ವಿವೇಕಾನಂದ ಪದವಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಗುರುಪ್ರಸಾದ್ ಅವರನ್ನು ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಖೋಖೋ ರಾಷ್ಟ್ರೀಯ ತರಬೇತುದಾರ ಹಾಗೂ ತೀರ್ಪುಗಾರ ಕೆನರಾ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕಾರ್ತಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ಜ್ಯೋತಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕ ದಾಮೋದರ್ ಸಹಕರಿಸಿದರು
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.