ಮಡಿಕೇರಿ ಜ.6 : ರಾಮನಗರ ಪಿರಮಿಡ್ ಧ್ಯಾನ ಮಂದಿರ ಹಾಗೂ ವಿವಿಧ ಜಿಲ್ಲೆಗಳ ಪಿರಮಿಡ್ ಕೇಂದ್ರಗಳ ಪಿರಮಿಡ್ ಮಾಸ್ಟರ್ಸ್‍ಗಳಿಂದ ಜ.7 ರಂದು ಮಡಿಕೇರಿಯಲ್ಲಿ “ಅನಾಪಾನಸತಿ ಧ್ಯಾನ” ಉಚಿತ ಧ್ಯಾನ ಶಿಬಿರ ನಡೆಯಲಿದೆ.
ನಗರದ ಓಂಕಾರ ಸದನದಲ್ಲಿ ಮಧ್ಯಾಹ್ನ 3 ರಿಂದ ಸಂಜೆ 6ರ ತನಕ ನಡೆಯಲಿರುವ ಶಿಬಿರದ ಅಧ್ಯಕ್ಷತೆಯನ್ನು ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ರಾಜೇಂದ್ರ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಮಡಿಕೇರಿ ಟೌನ್ ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಪಿ.ಕೃಷ್ಣರಾಜು ಪಾಲ್ಗೊಳ್ಳಲಿದ್ದಾರೆ ಎಂದು ಶಿಬಿರದ ಸಂಯೋಜಕ ಹೆಚ್.ಎಂ.ಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









