ಮಡಿಕೇರಿ ಜ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಜ.12 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ. ಮಂತರ್ ಗೌಡ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ತು ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ ಪ್ರಕಾಶ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕರಿ ಎ.ನಾಗಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ.ಪಿ.ಸುಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.









