ಮಡಿಕೇರಿ ಜ.7 : ರಾಜ್ಯ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಜ.8 ರಂದು ಪೊನ್ನಂಪೇಟೆಯ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.










