ಮಡಿಕೇರಿ ಜ.8 : ಸೋಮವಾರಪೇಟೆಯ ಆಂಜನೇಯ ದೇವಾಲಯದ ಆಡಳಿತ ಸಮಿತಿ ಸದಸ್ಯರ ನಿಯೋಗವು ಕರ್ನಾಟಕ ಸರ್ಕಾರದ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನ ಸಚಿವರ ಕಚೇರಿಗೆ ಭೇಟಿ ನೀಡಿದ ಆಡಳಿತ ಮಂಡಳಿ ಪ್ರಮುಖರು ಹಾಗೂ ಸದಸ್ಯರು ಸೋಮವಾರಪೇಟೆ ಕಕ್ಕೆಹೊಳೆ ಸಮೀಪದ ಶ್ರೀ ಆಂಜನೇಯ ದೇವಾಲಯದ ಪುನಶ್ಚೇತನ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ಮನವಿ ಸಲ್ಲಿಸಿದರು.
ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು, ಶೀಘ್ರವೇ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದರು. ನಿಯೋಗದಲ್ಲಿ ದೇವಾಲಯ ಸಮಿತಿ ಸದಸ್ಯರಾದ ಗೋಪಾಲ್, ನಂದ, ಸುರೇಶ್, ಸೀತಾರಾಮ್, ಉದ್ಯಮಿ ಅರುಣ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್ ಹಾಜರಿದ್ದರು.









