ನಾಪೋಕ್ಲು ಜ.8 : ಬಲ್ಲಮಾವಟಿ ಗ್ರಾ.ಪಂ ಯ 2022-23 ಸಾಲಿನ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮ ಸಭೆ ಹಾಗೂ ಜಮಾ ಮಂದಿ ಸಭೆಯನ್ನು ಜ.9 ರಂದು ಗ್ರಾ.ಪಂ ಅಧ್ಯಕ್ಷರಾದ ಎಂ.ಪಿ .ಶಾಂತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 10.30 ಗಂಟೆಗೆ ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮದ ಪಿಂಚಣಿದಾರರ ಸಂಘದ ಕಟ್ಟಡದಲ್ಲಿ ಸಭೆಯನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ವರದಿ : ದುಗ್ಗಳ ಸದಾನಂದ







