ಮಡಿಕೇರಿ ಜ.8 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ” ಸಂಘಟನಾ ಸಮಿತಿ ಸಭೆ ನಡೆಸಿ, ಸಮಾವೇಶದ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಸಚಿವರಾದ ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್ ಹಾಗೂ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.








