ನಾಪೋಕ್ಲು ಜ.8 : ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಿದ ಜಿಲ್ಲಾ ಕಹ್ಫುಲ್ ವರಾ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ನಾಪೋಕ್ಲುವಿನ ಮಾರುಕಟ್ಟೆ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಕೊಡಗು ಉಪ ಖಾಝಿಗಳಾದ ಅಬ್ದುಲ್ಲಾ ಉಸ್ತಾದ್, ಆಧ್ಯಾತ್ಮಿಕ ಉಲಮಾ ಒಕ್ಕೂಟದ ಯುವಜನ ಘಟಕವಾದ ಸುನ್ನಿ ಯುವಜನ ಸಂಘ (ಎಸ್‌ವೈಎಸ್ ) ಕಳೆದ 70 ವರ್ಷಗಳಿಂದ ಧಾರ್ಮಿಕ ಮತ್ತು ಶೈಕ್ಷಣಿಕ ಹಾಗೂ ಜನಪರ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಸಂಘಟನೆಯಾಗಿದೆ ಎಂದ ಅವರು ಶಾಂತಿ ಹಾಗೂ ಸಮಾಧಾನ ಮತ್ತು ಸಹಬಾಳ್ವೆಯನ್ನು ಸಾರುವ ಸಂಘಟನೆಯಾಗಿದೆ ಎಂದು ತನ್ನ ಅನುಭವ ಹಾಗೂ ಅಭಿಪ್ರಾಯವನ್ನು ವ್ಯಕ್ತಪಡಿಸಿರು.

ಮಜ್ಲಿಸುನ್ನೂರ್ ನೇತೃತ್ವ ವಹಿಸಿ ಮಾತನಾಡಿದ ಪಾಣಕ್ಕಾಡ್ ಮುಈನ್ ಅಲಿ ಶಿಹಾಬ್ ತಂಙಳ್ ಆಧ್ಯಾತ್ಮಿಕವಾಗಿ ಜನ ಮನಸ್ಸುಗಳನ್ನು ಶುಚೀಕರಿಸುವುದರ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದ ಅವರು ಕೆಲವು ಘಟನೆಗಳನ್ನು ಆಧರಿಸಿ ಧಾರ್ಮಿಕ ಉಪನ್ಯಾಸವನ್ನು ನೀಡಿದರು.
ಚೆರಿಯಪರಂಬು ದರ್ಗಾ ಝಿಯಾರತ್ ಹಿರಿಯ ವಿದ್ವಾಂಸರಾದ ಹುಸೈನ್ ಮುಸ್ಲಿಯಾರ್ ಕುಂಜಿಲ ಉಸ್ತಾದರು ವಹಿಸಿದ್ದರು.
ಕೇರಳದ ಮಹ್ ಮೂನ್ ಹುದವಿ ಮುಖ್ಯ ಭಾಷಣ ಮಾಡಿದರು.
ಕಾರ್ಯಕ್ರಮದ ಮೊದಲಿಗೆ ಸ್ವಾಗತ ಸಮಿತಿ ಜನರಲ್ ಕನ್ವೀನರ್ ಹಮೀದ್ ಹಾಜಿ ಬೆಟ್ಟಗೇರಿ ಧ್ವಜಾರೋಹಣ ನೆರವೇರಿಸಿದರು.
ಪ್ರಾಸ್ತಾವಿಕ ಭಾಷಣವನ್ನು ಎಸ್ ವೈ ಎಸ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಫೈಝಿ ಪ್ರಾಸ್ತಾವಿಕ ಮಾತನಾಡಿದರು.
ಎಸ್.ವೈ.ಎಸ್ ಕೊಡಗು ಜಿಲ್ಲಾಧ್ಯಕ್ಷ ಸಿ.ಪಿ.ಎಂ.ಬಶೀರ್ ಹಾಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಎಂಎಲ್‍ಎ ಇಬ್ರಾಹಿಂ ಮಾಸ್ಟರ್ ಸುಂಟಿಕೊಪ್ಪ, ಜಿಲ್ಲಾ ಪರಿಷತ್ ಮಾಜಿ ಉಪಾಧ್ಯ ಪಿ.ಎಂ.ಖಾಸಿಂ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ, ನಾಪೋಕ್ಲು ಪಟ್ಟಣ ಜುಮ್ಮಾ ಮಸೀದಿ ಅಧ್ಯಕ್ಷ ಎಂ.ಎಚ್ ಅಬ್ದುಲ್ ರೆಹಮಾನ್, ಬೋರ್ಡ್ ಮಾಜಿ ಅಧ್ಯಕ್ಷ ಯಾಕುಬ್, ನಾಪೋಕ್ಲು ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ ಮಹಮ್ಮದ್ ಹಾಜಿ, ನಾಪೋಕ್ಲು ಜಮಾ ಮಸೀದಿ ಯ ಮಾಜಿ ಅಧ್ಯಕ್ಷ ಪಿ.ಎಂ ಅಬ್ದುಲ್ ಅಝೀಜ್, ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಟಿ.ಎ.ಮೊಹಮ್ಮದ್, ನಾಪೋಕ್ಲು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎ. ಇಸ್ಮಯಿಲ್, ಹೊದ್ದೂರು ಗ್ರಾ.ಪಂ ಸದಸ್ಯ ಮೈದು ಕೊಟ್ಟಮುಡಿ, ನಾಪೋಕ್ಲು ಪಂಚಾಯಿತಿ ಸದಸ್ಯ ಕುರೇಶಿ, ನಾಪೋಕ್ಲು ಉದ್ಯಮಿ ಎಂ.ಎ.ಮನ್ಸೂರ್ ಆಲಿ, ಎಸ್‍ವೈಎಸ್ ಸಂಘಟಕ ಪಿ.ಎಮ್.ರಶೀದ್ ಸೇರಿದಂತೆ ಧರ್ಮ ಗುರುಗಳು ಹಾಗೂ ಇತರ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮುದಾಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ







