ಮಡಿಕೇರಿ ಜ.8 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2023-24ನೇ ಸಾಲಿನ ಹಿರಿಯ ಸಾಹಿತಿ ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದಂತೆ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಜ.29ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಕಥೆ ಬರೆಯುವ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ತಿಳಿಸಿದ್ದಾರೆ.
ಪ್ರತಿ ಕಾಲೇಜ್ ನಿಂದ 5 ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪದವಿ ಪೂರ್ವ ಶಿಕ್ಷಣದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಕಾಲೇಜ್ ನ ಮೂಲಕ ಈ ಕೆಳಕಂಡ ವಿಳಾಸಕ್ಕೆ ದಿನಾಂಕ 15.01.2024ರ ಒಳಗೆ ಕಳುಹಿಸಿಕೊಡಬೇಕು.
ಎಂ.ಪಿ.ಕೇಶವಕಾಮತ್, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಸ್‍ಜೆಎಸ್‍ಆರ್‍ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಕಾರ್ಯಪ್ಪ ವೃತ್ತ, ಮಡಿಕೇರಿ-571201. ಹೆಚ್ಚಿನ ವಿವರಗಳಿಗೆ ಎಸ್.ಐ.ಮುನೀರ್ ಅಹಮದ್, ಗೌರವ ಕಾರ್ಯದರ್ಶಿ ಮೊ. : 9886181613 ಮತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್ ಮೊ. : 9663256829 ಸಂಪರ್ಕಿಸಬಹುದಾಗಿದೆ.









