ಮಡಿಕೇರಿ ಜ.9 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಗೌರಮ್ಮ ದತ್ತಿ ಸಣ್ಣ ಕಥೆ ಬರೆಯುವ ಸ್ಪರ್ಧೆಗೆ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಥೆ ಬರೆಯುವ ಸ್ಪರ್ಧೆಯನ್ನು ಜ.22ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಬ್ಲಾಸಂ ಶಾಲೆಯಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹಮ್ಮದ್ ತಿಳಿಸಿದ್ದಾರೆ.
ಪ್ರತೀ ಪ್ರೌಢಶಾಲೆಯಿಂದ 5 ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಶಾಲೆಗಳ ಮೂಲಕ ಈ ಕೆಳಗಿನ ವಿಳಾಸಕ್ಕೆ 15.01.2024ರ ಒಳಗೆ ತಲುಪಿಸಬೇಕು.
ಎಂ.ಪಿ.ಕೇಶವಕಾಮತ್, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಎಸ್‍ಜೆಎಸ್‍ಆರ್‍ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಸುದರ್ಶನದ ವೃತ್ತ, ಮಡಿಕೇರಿ-571201. ಹೆಚ್ಚಿನ ವಿವರಗಳಿಗೆ ಎಸ್.ಐ.ಮುನೀರ್ ಅಹಮ್ಮದ್, ಗೌರವ ಕಾರ್ಯದರ್ಶಿ ಮೊ. : 9886181613 ಮತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್ ಮೊ. : 9663256829 ಸಂಪರ್ಕಿಸಬಹುದಾಗಿದೆ.









