ಕುಶಾಲನಗರ ಜ.9 : ಸರ್ಕಾರಿ ಆಸ್ಪತ್ರೆಯಲ್ಲಿ ಕುಶಾಲನಗರ ವ್ಯಾಪ್ತಿಯ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.
ತಾಯಿಯಿಂದ ಮಗುವಿಗೆ ಸಿಫಿಲಿಸ್ ಹಾಗೂ ಹೆಪಟೈಟಿಸ್ ಹರಡುವಿಕೆ ನಿರ್ಮೂಲನಾ ಆಂದೋಲನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 30 ಕ್ಕೂ ಹೆಚ್ಚು ಗರ್ಭಿಣಿ ಮಹಿಳೆಯರು ಪಾಲ್ಗೊಂಡಿದ್ದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಧುಸೂದನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಆಸ್ಪತ್ರೆಯ ಪ್ರಸೂತಿ ಹಾಗೂ ಹೆರಿಗೆ ತಜ್ಞರಾದ ಡಾ.ಪ್ರತಿಭಾ, ಗರ್ಭಿಣಿ ಮಹಿಳೆಯರ ಆರೋಗ್ಯ ಪದ್ದತಿ, ಕಾಲಾನುಕ್ರಮವಾಗಿ ತಪಾಸಣೆ ಮಾಡಿಸಿಕೊಳ್ಳುವ ಬಗೆ, ರಕ್ತ ಪರೀಕ್ಷೆ, ಗರ್ಭನಿರೋಧಕಗಳ ಬಳಕೆ ಸೇರಿದಂತೆ ಸಮಗ್ರ ಆರೋಗ್ಯ ನಿರ್ವಹಣೆಯ ಕುರಿತಾಗಿ ಮಾಹಿತಿ ನೀಡಿದರು.
ತಾಲ್ಲೂಕು ಆರೋಗ್ಯ ಸುರಕ್ಷಾ ಅಧಿಕಾರಿ ಕೆ.ವಿ.ಅಶ್ವಿನಿ, ವೈದ್ಯಾಧಿಕಾರಿ ಡಾ.ಪ್ರಾಣೇಶ್, ಆಸ್ಪತ್ರೆಯ ಕಛೇರಿ ಅಧೀಕ್ಷಕಿ ಅನಿತಾ, ಹಿರಿಯ ಶುಶ್ರೂಷಕಿ ಮಂಜುಳಾ, ಆಪ್ತಸಮಾಲೋಚಕಿ ಮುತ್ತಮ್ಮ, ಶ್ರೀಲತಾ, ದಿವಾಕರ್ ಇದ್ದರು.









