ಮಡಿಕೇರಿ ಜ.9 : ಮಡಿಕೇರಿ ನಗರದ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದ ಆರೋಪದ ಹಿನ್ನೆಲೆಯಲ್ಲಿ ನಗರಸಭೆಯ ಪೌರಾಯುಕ್ತರನ್ನು ವರ್ಗಾವಣೆಗೊಳಿಸುವಂತೆ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲು ನಗರಸಭೆಯ ಆಡಳಿತ ಮತ್ತು ವಿಪಕ್ಷ ಸದಸ್ಯರು ಸರ್ವಾನುಮತದ ತೀರ್ಮಾನ ಕೈಗೊಂಡಿದ್ದಾರೆ.
ಮಡಿಕೇರಿಯ ನಗರಸಭೆಯ ಪೌರಾಯುಕ್ತರ ವರ್ಗಾವಣೆ ಕುರಿತಂತೆ ನಗರಸಭೆಯ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಪೌರಾಯುಕ್ತರು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸ್ಪಂದಿಸುತ್ತಿಲ್ಲ. ಇದರಿಂದ ತೆರಿಗೆ ಪಾವತಿದಾರರಿಗೆ ಅನಾನುಕೂಲ ಹಾಗೂ ತೊಂದರೆಯಾಗುತ್ತಿದೆ. ಪೌರಾಯುಕ್ತರ ಕಾರ್ಯವೈಖರಿ ಬಗ್ಗೆ ಸದಸ್ಯರಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನವಿದೆ ಎಂದು ಆರೋಪಿಸಿದರು.
ಪೌರಾಯುಕ್ತರ ವರ್ಗಾವಣೆಗೆ ಸಂಬಂಧಿಸಿದಂತೆ ತುರ್ತು ಸಭೆ ಕರೆಯಲಾಗಿದೆ. ಸದಸ್ಯರು ತಮ್ಮ ಅಭಿಪ್ರಾಯ, ಸಲಹೆ ಸೂಚನೆಗಳನ್ನು ತಿಳಿಸುವಂತೆ ಹೇಳಿದರು.
ಎಸ್‌ಡಿಪಿಐ ಸದಸ್ಯ ಅಮೀನ್ ಮೊಹ್ಸಿನ್, ಬಿಜೆಪಿ ಸದಸ್ಯರಾದ ಅರುಣ್ ಶೆಟ್ಟಿ ಹಾಗೂ ಕೆ.ಎಸ್.ರಮೇಶ್ ಮಾತನಾಡಿ, ಪೌರಾಯುಕ್ತರ ವರ್ಗಾವಣೆಗೆ ಸಂಬಂಧಿಸಿದಂತೆ ಸರ್ವ ಸದಸ್ಯರ ಸಹಮತವಿರುವ ಹಿನ್ನೆಲೆಯಲ್ಲಿ ಒಬ್ಬೊಬ್ಬರ ಅಭಿಪ್ರಾಯ ಕೇಳುವ ಬದಲಿಗೆ ಕೈ ಎತ್ತಿ ಸಹಮತ ಸೂಚಿಸುವುದು ಒಳ್ಳೆಯದು ಎಂದರು.
ಈ ಸಂದರ್ಭ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರುಗಳು ಪಕ್ಷಭೇದ ಮರೆತು ಕೈ ಎತ್ತುವ ಮೂಲಕ ತಮ್ಮ ಸಹಮತ ವ್ಯಕ್ತಪಡಿಸಿದರು. ಪೌರಾಯುಕ್ತರ ವರ್ಗಾವಣೆಗೆ ಸಂಬಂಧಿಸಿದಂತೆ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಒಪ್ಪಿಗೆ ಸೂಚಿಸಿದರು.
ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭೆಯಲ್ಲಿ ಕಡತಗಳ ವಿಲೇವಾರಿ, ಫಾರಂ ನಂಬರ್ 3 ಹಾಗೂ ಖಾತೆ ವರ್ಗಾವಣೆಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಈ ಕುರಿತು ಸಾರ್ವಜನಿಕರಿಂದ ಸದಸ್ಯರಿಗೆ ದೂರು ಬಂದ ಹಿನ್ನೆಲೆಯಲ್ಲಿ ತುರ್ತುಸಭೆ ಕರೆಯಲಾಗಿದೆ. ಇಲ್ಲಿ ತೆಗೆದುಕೊಂಡ ನಿರ್ಧಾರದಂತೆ ಪೌರಾಯುಕ್ತರ ವರ್ಗಾವಣೆಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಎಸ್‌ಡಿಪಿಐನ ನಗರಸಭಾ ಸದಸ್ಯ ಅಮೀನ್ ಮೊಹ್ಸಿನ್ ಮಾತನಾಡಿ, ಸಾಂವಿಧಾನಿಕ ಹುದ್ದೆಯಲ್ಲಿರುವ ಅಧಿಕಾರಿಗಳು ಜನಮೆಚ್ಚುವಂತಹ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ನಗರಸಭೆಯ ಪೌರಾಯುಕ್ತರ ಕಾರ್ಯವೈಖರಿಯನ್ನು ವಿಪಕ್ಷವಾಗಿ ಸೂಕ್ಷ್ಮವಾಗಿ ಗಮನಿಸಿದ್ದೇವೆ. ತುರ್ತು ಸಭೆ ಕರೆದು ಪೌರಾಯುಕ್ತರ ವರ್ಗಾವಣೆ ಕೋರಿ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮಡಿಕೇರಿ ನಗರಕ್ಕೆ ನೀರು ಪೂರೈಸುವ ಕುಂಡಾಮೇಸ್ತ್ರಿ ಕಿರುಅಣೆಕಟ್ಟೆಯ ಮೋಟಾರ್ ಕೆಟ್ಟು ಹೋಗಿ 6 ತಿಂಗಳುಗಳೇ ಆಗಿದೆ. ಆದರೆ ಇಲ್ಲಿಯವರೆಗೆ ದುರಸ್ತಿ ಕಾರ್ಯಕ್ಕೆ ಪೌರಾಯುಕ್ತರು ಆಸಕ್ತಿ ತೋರಿಲ್ಲ ಎಂದು ಆರೋಪಿಸಿದರು.
Breaking News
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪ್ರಾರ್ಥನೆ*