ಮಡಿಕೇರಿ ಜ.10 : ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕೆಂದು ಒತ್ತಾಯಿಸಿ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಪಿಂಚಣಿ ಯೋಜನೆ ಎಂಪಿಎಸ್ ಸಂಬಂಧಿತ ಸಂಘಟನೆಗಳ ಸಭೆಯಲ್ಲಿ ಪಾಲ್ಗೊಂಡ ಅವರು ಪಿಂಚಣಿ ಯೋಜನೆಯ ಸಾಧಕ ಬಾಧಕಗಳ ಕುರಿತು ವಿವರಿಸಿದರು.
ಹಳೆಯ ಪಿಂಚಣಿ ಯೋಜನೆಯನ್ನು 2006 ಏ.1 ರಂದು ಅಂದಿನ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರದ್ದು ಮಾಡಿತು. 2006 ಮಾ.31ಕ್ಕಿಂತ ಮೊದಲು ನೇಮಕಾತಿಯಾದ ಖಾಸಗಿ ಅನುದಾನಿತ ಶಿಕ್ಷಕರಿಗೆ ಹಳೆಯ ಪಿಂಚಣಿ ಯೋಜನೆ ಈಗಲೂ ಅನ್ವಯವಾಗುತ್ತಿದೆ. ಆದರೆ 2006 ಏ.1 ರ ನಂತರ ಅನುಮೋದನೆ ಪಡೆದವರಿಗೆ ಹಳೆಯ ಪಿಂಚಣಿ ಯೋಜನೆ ರದ್ದಾಗಿದ್ದು, ಹೊಸ ಪಿಂಚಣಿ ಯೋಜನೆ ಕೂಡ ಅನ್ವಯವಾಗದೇ ಇರುವುದು ದೊಡ್ಡ ದುರಂತ ಎಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಂಜುನಾಥ್ ಕುಮಾರ್ ಅಭಿಪ್ರಾಯ ಹಂಚಿಕೊಂಡರು.
ಸರ್ಕಾರಿ ಎಂಪಿಎಸ್ ನೌಕರರ ಭತ್ಯೆ ಶೇ.10, ಸರ್ಕಾರದ ವಂತಿಗೆ ಶೇ.14ರಷ್ಟು ಮತ್ತು ಶೇ.24 ಮೊತ್ತವನ್ನು ಪ್ರತಿ ತಿಂಗಳು ಕೇಂದ್ರ ಸರ್ಕಾರದಿಂದ ಶೇರು ಮಾರುಕಟ್ಟೆಗೆ ಹಾಕಲಾಗುತ್ತದೆ. ಅದರಲ್ಲಿ ಎಸ್‍ಬಿಐ ಶೇ.40 ರಷ್ಟು, ಯುಟಿಐ ಶೇ.17, ಎಲ್‍ಐಸಿಗೆ ಶೇ.46 ರಷ್ಟು ಹಣವನ್ನು ವಿನಿಯೋಗಿಸಿದ್ದು, ಕೇಂದ್ರ ಸರ್ಕಾರ ಆ ಹಣವನ್ನು ಮರುಪಾವತಿಸಬೇಕು ಮತ್ತು ಎಂಪಿಎಸ್ ಪದ್ಧತಿ ರದ್ದು ಮಾಡಬೇಕು ಎಂದು ಮನವಿ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಕುಮಾರ್ ಎಂಪಿಎಸ್ ರದ್ದು ಮತ್ತು ಒಪಿಎಸ್ ಮರು ಜಾರಿ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿರುವುದಾಗಿ ತಿಳಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*