ನಾಪೋಕ್ಲು ಜ.10 : ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ಪರದಾಡುವಂತಾಗಿದೆ.
ಪ್ರತಿದಿನ ಕಾಫಿಯ ತೋಟಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳು ಕಾಫಿಯ ರೆಂಬೆಗಳನ್ನು ಮುರಿದು ನಷ್ಟಪಡಿಸುತ್ತಿರುವುದಲ್ಲದೇ ತೆಂಗು, ಅಡಿಕೆ , ಬಾಳೆ ಮತ್ತಿತರ ಕೃಷಿ ಯನ್ನು ನಾಶಪಡಿಸುತ್ತಿವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಗ್ರಾಮ ವ್ಯಾಪ್ತಿಯ ಕಾಫಿ ಬೆಳೆಗಾರರಾದ ಮನೆಯಪಂಡ ಧೀರಜ್ ತಿಮ್ಮಯ್ಯ , ಕುಟ್ಟನ ಶಶಿ ಹಾಗೂ ಕುಟ್ಟನ ಪೂವಯ್ಯ ಅವರ ತೋಟಗಳಿಗೆ ನುಗ್ಗಿದ ಕಾಡಾನೆಗಳು ಅಪಾರ ಪ್ರಮಾಣದ ನಷ್ಟವನ್ನು ಉಂಟು ಮಾಡಿವೆ. ಕಾಡಾನೆಗಳ ಸಂಚಾರದಿಂದ ಜನಸಾಮಾನ್ಯರು ಸಂಚರಿಸಲು ಭಯಪಡುವಂತಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಸಮಸ್ಯೆಯನ್ನು ಎದುರಿಸುತ್ತಿದ್ದು, ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ : ದುಗ್ಗಳ ಸದಾನಂದ