*ಮಡಿಕೇರಿ ಟೌನ್ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸತೀಶ್ ಪೈ, ಉಪಾಧ್ಯಕ್ಷರಾಗಿ ನಾಗೇಶ್ ಆಯ್ಕೆ*
1 Min Read
ಮಡಿಕೇರಿ ಜ.10 : ಮಡಿಕೇರಿ ಟೌನ್ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸತೀಶ್ ಪೈ ಹಾಗೂ ಉಪಾಧ್ಯಕ್ಷರಾಗಿ ಕೆ.ಆರ್.ನಾಗೇಶ್ ಆಯ್ಕೆಯಾಗಿದ್ದಾರೆ. ಇಂದು ಬ್ಯಾಂಕ್ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಇಬ್ಬರು ಅವಿರೋಧವಾಗಿ ಆಯ್ಕೆಯಾದರು.
ಇತ್ತೀಚೆಗೆ ನಡೆದ ನಿರ್ದೇಶಕರ ಆಯ್ಕೆ ಚುನಾವಣೆ ಸಂದರ್ಭ ಬಿಜೆಪಿ ಬೆಂಬಲಿತರು ಬಹುಮತ ಪಡೆದಿದ್ದರು.