ಮಡಿಕೇರಿ ಜ.10 : ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಸರ್ಕಾರವು ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಕೋವಿಡ್-19 ನಿಯಂತ್ರಣ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವಲ್ಲಿ 15 ದಿನಕ್ಕೊಮ್ಮೆ ವಿಡಿಯೋ ಸಂವಾದ ಮೂಲಕ ಸಭೆ ಏರ್ಪಡಿಸುವಂತೆ ಸಲಹೆ ನೀಡಿದರು.
ಗಡಿಭಾಗಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಅಗತ್ಯ ಪರೀಕ್ಷೆ ನಡೆಸಿ ವರದಿ ಸಲ್ಲಿಸುವುದು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧೋಪಚಾರಗಳನ್ನು ದಾಸ್ತಾನು ಮಾಡಿಕೊಳ್ಳುವುದು ಸೇರಿದಂತೆ ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ವೆಂಕಟ್ ರಾಜಾ ಅವರು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿ, ಕೋವಿಡ್ ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ, ಸಮುದಾಯ ಮತ್ತು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.
ಕೋವಿಡ್ 19 ಸಂಬಂಧ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿರುವ ವಿವರ ಇಂತಿವೆ: ಎಲ್ಲಾ ಹಿರಿಯ ನಾಗರಿಕರು (60 ವರ್ಷ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ವಿಶೇಷವಾಗಿ ಹೃದಯ, ಲಿವರ್ ಸಮಸ್ಯೆ, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ, ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳಬಾರದು.
ಜ್ವರ, ಕೆಮ್ಮು, ನೆಗಡಿ ಉಸಿರಾಟದ ಸೋಂಕಿನ ಲಕ್ಷಣ ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆಯಬೇಕು. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ನಾಗರಿಕರು/ ದುರ್ಬಲರನ್ನು ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆ ಹೊಂದಿದವರು ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದಲ್ಲಿ ಮಾಸ್ಕ್ ಧರಿಸಬೇಕು.
ಅಂತರರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದು ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
ನಿಗದಿತ ಗುರಿಯಂತೆ ಕೋವಿಡ್-19 ಪ್ರಕರಣಗಳ ಪರೀಕ್ಷೆ ನಡೆಸುವುದು, ಕೋವಿಡ್-19 ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಪ್ರಕರಣಗಳಿಗೆ ಕೋವಿಡ್-19 ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಎಲ್ಲಾ ಐಎಲ್‍ಐ/ ಎಸ್‍ಎಆರ್‍ಐ ಪ್ರಕರಣಗಳಿಗೆ ಕೋವಿಡ್-19 ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಸೋಂಕಿನ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್-19 ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು.
ಸೋಂಕಿನ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಲು ಅಗತ್ಯ ಸಂಖ್ಯೆಯ ತಂಡಗಳನ್ನು ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಕಾರ್ಯೋನ್ಮುಖಗೊಳಿಸುವುದು, ಎಲ್ಲಾ ಕೋವಿಡ್-19 ಪಾಸಿಟೀವ್ ಫಲಿತಾಂಶ ಬಂದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‍ಗೆ ಕಡ್ಡಾಯವಾಗಿ ಕಳುಹಿಸಬೇಕು. ಪಟ್ಟಣ ಹಾಗೂ ಗ್ರಾಮಗಳಲ್ಲಿ ವರದಿಯಾಗುವ ಜ್ವರ ಪ್ರಕರಣಗಳ ವರದಿಯ ಬಗ್ಗೆ ದೈನಂದಿನ ಪರಿಶೀಲನೆ ನಡೆಸುವುದು.
ಜ್ವರ ಪ್ರಕರಣಗಳ ಕುರಿತು ದೈನಂದಿನ ಸಮೀಕ್ಷೆ ಹಾಗೂ ಏರಿಕೆ ಕಂಡು ಬಂದಲ್ಲಿ ಸ್ಥಳೀಯವಾಗಿ ನಿಯಂತ್ರಣ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವುದು. ಗಡಿ ಭಾಗಗಳಲ್ಲಿನ ಸ್ಥಳೀಯ ಸಂಸ್ಥೆಗಳ ಜೊತೆ(ತಾಲ್ಲೂಕು ಪಂಚಾಯಿತಿ/ಪಟ್ಟಣ ಪಂಚಾಯಿತಿ/ ಗ್ರಾಮ ಪಂಚಾಯಿತಿ) ಮುಖ್ಯಸ್ಥರೊಂದಿಗೆ ಸಂಬಂಧಪಟ್ಟ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಕೋವಿಡ್-19 ಜೆಎನ್.1 ತಳಿಯ ವೈರಸ್ ನಿಯಂತ್ರಣದಲ್ಲಿ ಇವರಪಾತ್ರ ಹಾಗೂ ಸಹಕಾರದ ಕುರಿತು ಮನವರಿಕೆ ಮಾಡಿಕೊಡುವುದು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*