ಮಡಿಕೇರಿ ಜ.10 : ಆಹಾರ ಪದಾರ್ಥಗಳ ತಯಾರಕರು, ವ್ಯಾಪಾರ, ವಹಿವಾಟುದಾರರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (ಎಫ್‍ಎಸ್‍ಎಸ್‍ಎ) ವತಿಯಿಂದ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದ್ದು, ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಹೋಮ್ ಸ್ಟೇ ಮಾಲೀಕರು ಕಾಯ್ದೆಯಡಿ ನೋಂದಣಿ/ ಪರವಾನಗಿಯನ್ನು ಪಡೆದುಕೊಂಡಿದೆ. ಇಲಾಖೆಯ ನೋಂದಣಿ/ ಪರವಾನಗಿ ಇಲ್ಲದೆ ಅನಧಿಕೃತವಾಗಿ ಹೋಮ್ ಸ್ಟೇಗಳನ್ನು ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ.
ಕೊಡಗು ಜಿಲ್ಲೆಯು ಪ್ರವಾಸೋದ್ಯಮಕ್ಕೆ ಹೆಸರಾಗಿದ್ದು, ಪ್ರವಾಸಿಗರ ಹಿತದೃಷ್ಟಿ ಗಮನದಲ್ಲಿರಿಸಿಕೊಂಡು ಉತ್ತಮ ಗುಣಮಟ್ಟದ ಹಾಗೂ ಶುಚಿಯಾದ ಆಹಾರ ಪದಾರ್ಥಗಳನ್ನು ನೀಡುವ ಸಲುವಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ವತಿಯಿಂದ ಎಲ್ಲಾ ಹೋಮ್ ಸ್ಟೇ ನಡೆಸುತ್ತಿರುವವರು ಕಡ್ಡಾಯವಾಗಿ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಇ. ಅವರು ತಿಳಿಸಿದ್ದಾರೆ.









