ಮಡಿಕೇರಿ ಜ.10 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿಯ ಯುವಕರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಜ.24 ರಿಂದ ಫೆ.7 ರವರೆಗೆ ಜಿಮ್/ಫಿಟ್ನೆಸ್ ತರಬೇತಿ ಶಿಬಿರ(15 ದಿನಗಳು), ವಿದ್ಯಾರ್ಹತೆ ದ್ವಿತೀಯ ಪಿಯುಸಿ, 16 ರಿಂದ 30 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರು ವಿದ್ಯಾನಗರ/ ಶ್ರೀಕಂಠೀರವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಜನವರಿ, 26 ರಿಂದ ಫೆಬ್ರವರಿ, 07 ರವರೆಗೆ ಬ್ಯೂಟೀಷಿಯನ್ ತರಬೇತಿ ಶಿಬಿರ ನಡೆಯಲಿದೆ. ಎಸ್‍ಎಸ್‍ಎಲ್‍ಸಿ (ಪಾಸ್/ಫೇಲ್). 15 ರಿಂದ 29 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರು ಕುಂಬಳಗೋಡು ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಜನವರಿ, 27 ರಿಂದ ಫೆಬ್ರವರಿ, 07 ರವರೆಗೆ ವೀಡಿಯೋಗ್ರಫಿ ತರಬೇತಿ ಶಿಬಿರ ನಡೆಯಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. 15 ರಿಂದ 29 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರು ಕುಂಬಳಗೋಡು ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಜನವರಿ, 31 ರಿಂದ ಫೆಬ್ರವರಿ, 07 ರವರೆಗೆ ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರ ನಡೆಯಲಿದೆ. ಪದವಿ ಹಾಗೂ ಪತ್ರಿಕೋದ್ಯಮಗೆ ಪ್ರಾಮುಖ್ಯತೆ. 15 ರಿಂದ 29 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ನಡೆಯಲಿದೆ.
ತರಬೇತಿ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಲಘು ಉಪಹಾರ ಒದಗಿಸಲಾಗುವುದು. ಹೊರ ಜಿಲ್ಲೆಗಳಿಂದ ಭಾಗವಹಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.
ಪರಿಶಿಷ್ಟ ಜಾತಿಯ ಯುವಜನ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿಯಲ್ಲಿ ಪಡೆದು ಭರ್ತಿ ಮಾಡಿ ಜನವರಿ, 17 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.08272-220986/ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*