ಮಡಿಕೇರಿ ಜ.10 : ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ.
ಅರಣ್ಯ ಅಧಿಕಾರಿಗಳು ಹುಲಿಯ ಮೃತದೇಹ ಪರಿಶೀಲಿಸಿದಾಗ ಬೇರೆ ಪ್ರಾಣಿಗಳೊಂದಿಗೆ ಕಾದಾಡಿರುವ ಗಾಯದ ಗುರುತುಗಳು ಕಂಡು ಬಂದಿದೆ. ಅಂದಾಜು 14 ವರ್ಷದ ಹುಲಿ ನಿತ್ರಾಣದಿಂದ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ತಿತಿಮತಿ ಎಸಿಎಫ್ ಗೋಪಾಲ್, ಪೊನ್ನಂಪೇಟೆ ಆರ್‌ಎಫ್‌ಓ ಶಂಕರಪ್ಪ, ಡಿಆರ್‌ಎಫ್‌ಓ ದಿವಾಕರ್, ತಿತಿಮತಿ ವಲಯದ ಡಿಆರ್‌ಎಫ್‌ಓ ರವಿಕಿರಣ್, ಚೇತನ್, ಕಲ್ಲಳ್ಳ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಹುಲಿಯ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
Breaking News
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*