ಮಡಿಕೇರಿ ಜ.11 : ಹುಣಸೂರು ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರನ್ನು ಒದಗಿಸಲು 88.75 ಲಕ್ಷ ರೂ ವೆಚ್ಚದ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಶಾಸಕ ಜಿ.ಡಿ ಹರೀಶ್ ಗೌಡ, ಗ್ರಾಮದ ಮುಖಂಡರು ಮತ್ತು ಅಧಿಕಾರಿಗಳು ಹಾಜರಿದ್ದರು.









