ಮಡಿಕೇರಿ ಜ.11 : ಬೆಂಗಳೂರಿನ ಆರ್.ಎ.ಮಂಡುಕರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಎಚ್.ಆರ್.ಪಲ್ಲವಿ ಅವರು 400 ಮೀಟರ್ ಓಟ ಸ್ಪರ್ಧೆಯಲ್ಲಿ ಪ್ರಥಮ ಮತ್ತು 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಮಹಿಳೆಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್‍ಆಗಿ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಾಗೂ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಹಾಗೆಯೇ ವೈ.ಎನ್.ಕವನ್ ಕುಮಾರ್ ಅವರು ಪುರುಷರ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕೊಡಗು ಜಿಲ್ಲೆಯಿಂದ 4 ಮಂದಿ ಗೃಹರಕ್ಷಕರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ರಾಜ್ಯ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟದಲ್ಲಿ ಜಯ ಸಾಧಿಸಿದ್ದಾರೆ.
ಎ.ಪಿ.ಜಯಕುಮಾರ್ ಅವರು ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ತರಬೇತಿ ಅಕಾಡೆಮಿಯಲ್ಲಿ ನಡೆದ ಅಡ್ವಾನ್ಸ್ ಪೈರ್ ಪೈಟಿಂಗ್ ತರಬೇತಿಯಲ್ಲಿ ಒಟ್ಟು 60 ಗೃಹರಕ್ಷಕರಲ್ಲಿ ಪ್ರಥಮ ಸ್ಥಾನಪಡೆದಿರುತ್ತಾರೆ. ಮತ್ತು ಗೃಹರಕ್ಷಕರ ಅಧೀಕಾರಿಗಳ ತರಬೇತಿಯಲ್ಲಿ ದ್ವೀತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶೀಕ ತರಬೇತಿ ಕೇಂದ್ರ ದೇವರಬೆಳಕೆರೆ ದಾವಣಗೆರೆ ಜಿಲ್ಲೆಯಲ್ಲಿ ನಡೆದ ಪುನರ್ ಮನನ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದು ಕೊಡಗು ಜಿಲ್ಲೆಗೆ ಹೆಸರು ತಂದಿದ್ದಾರೆ.
ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗೃಹರಕ್ಷಕ ದಳದ ಸಮಾದೇಷ್ಟರಾದ ಕೆ.ಎಸ್.ಸುಂದರರಾಜ್ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.
ಗೃಹರಕ್ಷಕ ದಳದ ಜಿಲ್ಲಾ ಬೋಧಕರಾದ ಡಿ.ಅಕ್ಷಯ್ ಕುಮಾರ್, ಗೃಹ ರಕ್ಷಕದಳದ ಎಂ.ವಿಶ್ವನಾಥ, ವಿ.ಜಿ.ನಿರ್ಮಲಾ, ಮಡಿಕೇರಿ ಘಟಕಾಧಿಕಾರಿ ವೈ.ಎನ್.ಕವನ್‍ಕುಮಾರ್ ಹಾಗೂ ಗೃಹರಕ್ಷಕ ವಿಭಾಗದ ಘಟಕಾಧಿಕಾರಿಗಳು ಮತ್ತು ಗೃಹರಕ್ಷಕ ಸಿಬ್ಬಂದಿಗಳು ಇದ್ದರು.
Breaking News
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*