ಮಡಿಕೇರಿ ಜ.11 : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಪಾರಾಣೆ ಮತ್ತು ಶ್ರೀಮಂಗಲ ಆಯುಷ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್ (ಸಿಎಚ್ಒ) ಹುದ್ದೆಗಳಿಗೆ ಹಾಗೂ ವಿರಾಜಪೇಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ಭರ್ತಿ ಮಾಡುವ ಸಂಬಂಧ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜ.16 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆಯುಷ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಹಾಗೂ ಸಮಿತಿ ಸದಸ್ಯರ ಸಮ್ಮುಖದಲ್ಲಿ ನೇರ ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನಿಗಧಿತ ಸಮಯಕ್ಕೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಜರಾಗುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆಯುಷ್ ಕಚೇರಿಯ ದೂ.ಸಂ.08272-295128 ಹಾಗೂ 8618442161 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಜಿಲ್ಲಾ ಆಯುಷ್ ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ.ರೇಣುಕಾದೇವಿ ಅವರು ತಿಳಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*