ಮಡಿಕೇರಿ ಜ.11 : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಿಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ 5024 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5014 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್ ತಿಂಗಳಿನಿಂದ 2023 ರ ಏಪ್ರಿಲ್, 01 ರಿಂದ ಡಿಸೆಂಬರ್ ತಿಂಗಳ ಅಂತ್ಯದವರೆಗೆ, 220 ಪ್ರಕರಣಗಳು ದಾಖಲಾಗಿ 210 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 10 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ.
ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939 ನ್ನು ಸಂಪರ್ಕಿಸಬಹುದು.
ಈ ವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.5 ಲಕ್ಷ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2023-24ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಾಧ್ಯಕ್ಷರು ತಿಳಿಸಿದ್ದಾರೆ.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*