ಮಡಿಕೇರಿ ಜ.12 : ಕೊಡವರಂತಹ ಆದಿಮ ಸಂಜಾತ ಅತೀಸೂಕ್ಷ್ಮ ಸಮುದಾಯಗಳ ಉಳಿವಿಗಾಗಿ ಸಂವಿಧಾನದಡಿಯಲ್ಲಿ ನ್ಯಾಯಸಮ್ಮತವಾದ ಹಕ್ಕುಗಳನ್ನು ಪ್ರತಿಪಾದಿಸಲು ಅವಕಾಶವಿದ್ದು, ಸ್ವಯಂ ನಿರ್ಣಯದ ಹಕ್ಕಿನ ಮೂಲಕ ಕೊಡವ ಲ್ಯಾಂಡ್ ಹೊಂದುವುದು ಕೊಡವರ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ.
ರಾಜ್ಯದಲ್ಲಿ ಇತರರ ಬಗ್ಗೆ ಎಂದಿಗೂ ಕಾಳಜಿ ಇಲ್ಲದ ಜನರು ಊಳಿಗಮಾನ್ಯ ಮನೋಭಾವದಿಂದ ರಾಜ್ಯವನ್ನು ಆಳುತ್ತಿದ್ದಾರೆ. ಅವರು ರಾಜ್ಯದ ಕನಿಷ್ಠ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಮತವನ್ನು ಹೊಂದಿದ್ದಾರೆ ಮತ್ತು ತಮ್ಮ 60 ವಿಧಾನಸಭಾ ಕ್ಷೇತ್ರಗಳ ಭಾಗವಾಗಿರುವ ಇತರ ಸೂಕ್ಷ್ಮ ಸಮುದಾಯಗಳ ಯೋಗಕ್ಷೇಮದ ಬಗ್ಗೆ ಅವರು ಎಂದಿಗೂ ತಲೆಕೆಡಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.
ಇತರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಮಂದಿ ತಮ್ಮ ಸಮುದಾಯಕ್ಕೆ ಎಷ್ಟು ಸೀಟು ಬೇಕೆನ್ನುವ ಲೆಕ್ಕಾಚಾರದಲ್ಲಿ ಚುನಾವಣೆಗಳ ಸಂದರ್ಭ ಮತಾಂಧತೆಯ ಅಶ್ಲೀಲತೆಯನ್ನು ಅನಾವಣಗೊಳಿಸುತ್ತಾರೆ. ತಮ್ಮ ಈ ನಡೆ ಜಾತ್ಯತೀತತೆಯ ಮತ್ತು ಅಂತರ್ಗತ ರುಜುವಾತುಗಳಿಗೆ ಅನುಗುಣವಾಗಿದೆ ಎಂದು ಹೇಳಿಕೊಂಡೆ ಮತಾಂಧತೆಯ ವಿಕೃತಿಯನ್ನು ಮೆರೆಯುತ್ತಾರೆ. ಕೊಡವರಂತಹ ಆದಿಮ ಸಂಜಾತ ನಗಣ್ಯ ಅತೀಸೂಕ್ಷ್ಮ ಸಮುದಾಯಗಳು ತಮ್ಮ ಉಳಿವಿಗಾಗಿ ಸಂವಿಧಾನದಡಿಯಲ್ಲಿ ನ್ಯಾಯಸಮ್ಮತವಾದ ಹಕ್ಕುಗಳನ್ನು ಪ್ರತಿಪಾದಿಸಿದರೆ, ಈ ಕೋಮುವಾದಿಗಳು ಮೊಸಳೆ ಕಣ್ಣೀರು ಸುರಿಸುತ್ತಾ, ಕೊಡವರ ಹಕ್ಕುಗಳು ಇತರ ಸಮುದಾಯದ ಹಿತಾಸಕ್ತಿಗಳಿಗೆ ಧಕ್ಕೆ ತರುತ್ತವೆ ಎಂದು ಅರ್ಥಹೀನವಾಗಿ ವರ್ತಿಸುತ್ತಿದ್ದಾರೆ. ತಾವು ಬಹುದೊಡ್ಡ ಮಾನವತಾವಾದದ ಹರಿಕಾರರು ಮತ್ತು ಸಾಮಾಜಿಕ ಸಮತಾವಾದದ ವೀರಾಗ್ರೇಸರೆಂದು ಹುಸಿಯಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ.
ಸುಳ್ಯ-ಬೆಳ್ತಂಗಡಿಯಿಂದ ಹಾವೇರಿ ತನಕ, ಹಾವೇರಿಯಿಂದ ಚಿತ್ರದುರ್ಗ, ಚಿತ್ರದುರ್ಗದಿಂದ ಕೋಲಾರ, ಕೋಲಾರದಿಂದ ಚಾಮರಾಜನಗರ, ಚಾಮರಾಜನಗರದಿಂದ ಪಿರಿಯಾಪಟ್ಟಣದವರೆಗಿನ ದಟ್ಟ ಬಾಹುಳ್ಯ ಪ್ರದೇಶದಲ್ಲಿ ತಮ್ಮ ಜನಸಂಖ್ಯಾ ತೂಕವನ್ನು ಹೊಂದಿರುವ ಅವರು ಮಾನಸಿಕ ಯುದ್ಧದ ಮೂಲಕ ನಮ್ಮನ್ನು ಬೆದರಿಸಲು ಮತ್ತು ಕೊಡವರಲ್ಲಿ ಭಯದ ಮನೋವಿಕಾರವನ್ನು ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಹೇಯ ಕೃತ್ಯಕ್ಕೆ ರಾಜ್ಯದ ಇತರ ಸಣ್ಣಪುಟ್ಟ ಸಮುದಾಯಗಳನ್ನು ಮಾನವ ಗುರಾಣಿಯಾಗಿ ಬಳಸಿಕೊಳ್ಳುತ್ತಾರೆ. ವಾಸ್ತವವಾಗಿ ಅವರಿಗೆ ಪರಿಶಿಷ್ಟರು ಹಾಗೂ ರಾಜ್ಯದ ಇತರ ಅಳಿವಿನಂಚಿನಲ್ಲಿರುವ ಕೆಳ ಹಂತದ ಸಮುದಾಯಗಳ ಬಗ್ಗೆ ಕಾಳಜಿ ಅಥವಾ ಪ್ರೀತಿ ಲವಲೇಷವು ಇಲ್ಲ. ಮಾನವ ಮಲ(ಅಮೇಧ್ಯ) ತಿನ್ನುವಂತೆ ಮಾಡಿದ ಅನೇಕ ಅಮಾನವೀಯ ಹೇಯ ಕೃತ್ಯಗಳೊಂದಿಗೆ ತಮ್ಮ ಕೊಳಕು ಮುಖವನ್ನು ಪ್ರದರ್ಶಿಸಿದ ನಿದರ್ಶನವನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ.
ಕೊಡವರಿಗೆ ಸಂವಿಧಾನವೇ ಸರ್ವಶ್ರೇಷ್ಠವಾಗಿದೆ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಉದಾತ್ತ ಸಂವಿಧಾನ ಮಾತ್ರ ಈ ಬಹುಸಂಖ್ಯಾತ ಸಮುದಾಯಗಳ ದುಷ್ಟ ವಿನ್ಯಾಸಗಳ ಕಪಿಮುಷ್ಠಿಯಿಂದ ಕೊಡವರು ಹೊರಬರಲು ದಿವ್ಯಾಔಷಧವಾಗಿದೆ. ತಮ್ಮ ಜನಸಂಖ್ಯಾ ಬಾಹುಳ್ಯದ ತೂಕದ ಮೂಲಕ ಬೆದರಿಕೆ ಹಾಕುವುದರೊಂದಿಗೆ ವ್ಯವಸ್ಥಿತವಾದ ಸಾಂವಿಧಾನಿಕ ಉಲ್ಲಂಘನೆಯನ್ನು ಈ ಸಮುದಾಯಗಳು ನಡೆಸಿದ್ದು, ನಮ್ಮ ರಕ್ಷಣೆಗಾಗಿ ಮತ್ತು ಅವರಿಂದ ಉಂಟಾದ ಅಸಂಗತತೆಗಾಗಿ ನಮ್ಮ ದೇಶದ ಅತ್ಯುನ್ನತ ಕಾನೂನು ನ್ಯಾಯಾಲಯ (ಸರ್ವೋಚ್ಚ ನ್ಯಾಯಾಲಯ) ಮತ್ತು ವಿಶ್ವಸಂಸ್ಥೆಯ ಬಾಗಿಲು ತಟ್ಟಲು ನಮಗೆ ದಾರಿ ಮಾಡಿಕೊಡುತ್ತಿದೆ ಎಂದು ತಿಳಿಸಿದ್ದಾರೆ.
ಕೊಡವರು ಧೈರ್ಯವಾಗಿರಬೇಕು, ಕೊಡವ ನೆಲ ನಮ್ಮ ಸಾಂಪ್ರದಾಯಿಕ ಮತ್ತು ಪ್ರಾಚೀನ ಅವಿಭಾಜ್ಯ ತಾಯ್ನಾಡಾಗಿದೆ. ಇದನ್ನು ಪುನರುಜ್ಜೀವನಗೊಳಿಸೋಣ ಮತ್ತು ರಕ್ಷಿಸೋಣ. ಇದು ನಮ್ಮ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕು, ನಮ್ಮ ಹಕ್ಕಿನ ಬಗ್ಗೆ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿದೆ. ಈ ಪ್ರಜಾಪೀಡಕ ಉಪದ್ರ ಜೀವಿಗಳು ತಮ್ಮ ಬಲಾಢ್ಯ ಜನಸಂಖ್ಯಾ ತೂಕದ ಮೂಲಕ ಒಡ್ಡುವ ಗೊಡ್ಡು ಬೆದರಿಕೆಯನ್ನು ನಾವು ಗಮನಿಸಬಾರದು. ನಮ್ಮ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕು ಕೊಡವ ಲ್ಯಾಂಡ್ ಆಗಿದ್ದು, ಇದನ್ನು ವಿಶ್ವರಾಷ್ಟ್ರ ಸಂಸ್ಥೆ ಚಾರ್ಟರ್/ಸನದ್ ಮತ್ತು ನಮ್ಮ ಶ್ರೇಷ್ಠ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸುತ್ತದೆ. ಆ ಮೂಲಕ ನಮ್ಮ ಭವಿಷ್ಯ ಮತ್ತು ಸ್ವಯಂ ನಿರ್ಣಯದ ಹಕ್ಕುಗಳನ್ನು ನಿರ್ಧರಿಸಿಕೊಳ್ಳೋಣ. ಇವರ್ಯಾರಿಂದಲೂ ಕೊಡವರನ್ನು ಬೆದರಿಸಲು ಅಥವಾ ಆಮಿಷದಿಂದ ಮಣಿಸಲು ಸಾಧ್ಯವಿಲ್ಲ ಎಂದು ಎನ್.ಯು.ನಾಚಪ್ಪ ದೃಢ ನುಡಿಯಾಡಿದ್ದಾರೆ.
Breaking News
- *ಕೊಡಗಿನ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ : ಅಧಿಕಾರಿಗಳಿಗೆ 2 ತಿಂಗಳ ಗಡುವು*
- *ಸಿಎನ್ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ : 9 ಪ್ರಮುಖ ನಿರ್ಣಯಗಳ ಮಂಡನೆ*
- *ಮಡಿಕೇರಿ : ನ.27 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ : ಸಿವಿಲ್ ನ್ಯಾಯಾಧೀಶೆ ಶುಭ*
- *ವಿರಾಜಪೇಟೆಯಲ್ಲಿ ನ.27 ರಂದು ಕಾವೇರಿ ಕಾರ್ನಿವಾಲ್ ಫೆಸ್ಟ್*
- *ಚೆಟ್ಟಳ್ಳಿ ಗ್ರಾ.ಪಂ ಉಪಚುನಾವಣೆ : ಅಯ್ಯಂಡ್ರ ಭಾಗೀರಥಿ ಗೆಲುವು*
- *ಸಹಕಾರ ತರಬೇತಿ (ಡಿಸಿಎಂ)ಗೆ ಅರ್ಜಿ ಆಹ್ವಾನ*
- *ತ್ಯಾಗರಾಜ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ : ಪರಿಸರರೊಂದಿಗೆ ಮಕ್ಕಳು ಬೆಳೆಯಬೇಕು : ಗೀತಾ ಗಿರೀಶ್*
- *ಮಡಿಕೇರಿಯಲ್ಲಿ ಸಂವಿಧಾನ ದಿನಾಚರಣೆ : ರಾಷ್ಟ್ರದ ಅಭಿವೃದ್ಧಿಗೆ ಸಂವಿಧಾನ ಪಾತ್ರ ಪ್ರಮುಖ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
- *ಪುತ್ತೂರು : ವಿಸಿಇಟಿಯಲ್ಲಿ ಮಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ*