ಕುಶಾಲನಗರ ಜ.12 : ಕುಶಾಲನಗರದ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎನ್.ಎಸ್.ಎಸ್. ಘಟಕ, ಸಮಾಜ ಸಂಘ, ವಿದ್ಯಾರ್ಥಿ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕ, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ
ಮತ್ತು ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅಧ್ಯಕ್ಷ ಎಂ.ಸಂಪತ್ ಕುಮಾರ್ , ವಿದ್ಯಾರ್ಥಿಗಳು ವಿಶ್ವದ ಆಧ್ಯಾತ್ಮಿಕ ಗುರು ಎನಿಸಿರುವ ಸ್ವಾಮಿ ವಿವೇಕಾನಂದರ ಉದಾತ್ತ ವ್ಯಕ್ತಿತ್ವ, ಜೀವನ ಕ್ರಮ, ದೂರದೃಷ್ಠಿ ಹಾಗೂ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರದ ಸಮಗ್ರತೆ ಹಾಗೂ ಏಕತೆಯನ್ನು ಎತ್ತಿ ಹಿಡಿಯಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ಸ್ವಾಮಿ ವಿವೇಕಾನಂದರರು
ಯುವಜನತೆಗೆ ನೀಡಿದ ಅವರ ಕರೆ ‘ಏಳಿ.. ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬುದು ಸರ್ವ ಕಾಲಕ್ಕೂ ನೆನೆಯುವ, ಯುವಕರನ್ನು ಉತ್ತಮ ಕೆಲಸಗಳಿಗೆ ತೊಡಗಿಸಲು ಬಡಿದೆಚ್ಚರಿಸುವ ವಾಕ್ಯವಾಗಿದೆ. ಹೀಗೆ ಅವರ ಇಂತಹ ಹಲವು ಕೊಡುಗೆಗಳಿಂದ ಅವರ ಸ್ಮರಣಾರ್ಥ, ಅವರ ಕೊಡುಗೆ, ಸೇವೆಗಳ ನೆನಪಿಗಾಗಿ, ಅವರಿಂದ ಯುವ ಜನಾಂಗ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನವನ್ನು ‘ರಾಷ್ಟ್ರೀಯ ಯುವ ದಿನ’ ಎಂದು ಆಚರಣೆ ಮಾಡಲಾಗುತ್ತಿದೆ ಎಂದರು.
ವಿವೇಕಾನಂದರ ಜೀವನ, ಚರಿತ್ರೆ, ಬದುಕು ಹಾಗೂ ಸಾಧನೆಯು ಜಾಗತಿಕ ಮಟ್ಟದಲ್ಲಿ ಭಾರತೀಯ ಸಂಸ್ಕೃತಿಯನ್ನು ಮೆರೆದಿದೆ ಎಂದರು.
ಸ್ವಾಮಿ ವಿವೇಕಾನಂದರ ಜೀವನ ಕ್ರಮ ಕುರಿತು ಮಾಹಿತಿ ನೀಡಿದ ಸಮಾಜ ವಿಜ್ಞಾನ ಶಿಕ್ಷಕಿ ಎಸ್.ಎಂ.ಗೀತಾ,
ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದೆ. ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಬದುಕಿದ ಹಾದಿ, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳಿಂದ ಅವರು ಇಂದಿಗೂ ಎಂದೆಂದಿಗೂ ಪ್ರಪಂಚದ ಆಧ್ಯಾತ್ಮಿಕ ಗುರು ಹಾಗೂ ಆದರ್ಶ ವ್ಯಕ್ತಿಯೇ ಆಗಿದ್ದಾರೆ ಎಂದು ಬಣ್ಣಿಸಿದರು.
ಭಾರತದ ಆಧ್ಯಾತ್ಮಿಕ ಸರ್ವ ಶ್ರೇಷ್ಠ ಗುರು ಸ್ವಾಮಿ ವಿವೇಕಾನಂದರ ಜಯಂತಿಯ ಸ್ಮರಣಾರ್ಥವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಸ್ವಾಮಿ ವಿವೇಕಾನಂದರು ವಿವಿಧ ವಿಷಯಗಳ ಬಗ್ಗೆ, ವಿಶೇಷವಾಗಿ
ತತ್ವಶಾಸ್ತ್ರ ಮತ್ತು ಇತಿಹಾಸದ ಬಗ್ಗೆ ಅಪಾರ ಜ್ಞಾನವನ್ನು ಪಡೆದು ವಿಶ್ವದ ಗಮನ ಸೆಳೆದ ಆಧ್ಯಾತ್ಮಿಕ ಚಿಂತಕರಾಗಿದ್ದರು ಎಂದರು.
ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಜಿಲ್ಲಾ ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಂಯಮ ಬೆಳೆಸಿಕೊಂಡು ರಾಷ್ಟ್ರೀಯ ನಾಯಕರ ಆದರ್ಶ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಅನ್ಸಿಲಾ ರೇಖಾ, ಕಛೇರಿ ಸಿಬ್ಬಂದಿ ಎಂ.ಉಷಾ ಇದ್ದರು.
ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿವೇಕಾನಂದರ ಸಂದೇಶದ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಕ್ಕಳಿಗೆ ರಾಷ್ಟ್ರೀಯ ಯುವ ದಿನದ ಅಂಗವಾಗಿ ಏರ್ಪಡಿಸಿದ್ದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಇದಕ್ಕೂ ಮೊದಲು ರಾಷ್ಟ್ರೀಯ ಯುವ ದಿನದ ಅಂಗವಾಗಿ ಶಾಲಾ ಮೈದಾನದಲ್ಲಿ ರಾಷ್ಟ್ರೀಯ ಏಕತೆಗಾಗಿ ಮ್ಯಾರಾಥಾನ್ ಓಟವನ್ನು ಏರ್ಪಡಿಸಲಾಗಿತ್ತು.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*