Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಣರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಣರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*

ಜನವರಿ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.13 : ಇದೇ ಜ.26 ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಸ್ವಾಗತ, ಧ್ವಜಾರೋಹಣ ಮತ್ತು ವೇದಿಕೆ, ಸಾಂಸ್ಕೃತಿಕ, ಕವಾಯತು, ಉಪಾಹಾರ, ಭಾಷಣ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಪೂರೈಕೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ಕಳೆದ ಬಾರಿಯಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ಸಲಹೆ ಮಾಡಿದರು. ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಉಪಾಹಾರ ಕಲ್ಪಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ರಾಷ್ಟ್ರಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳನ್ನು ಶುಚಿಗೊಳಿಸಿ, ದೀಪಾಲಂಕಾರ ಮಾಡುವಂತೆ ನಗರಸಭಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧಿಸಿದಂತೆ ಸಚಿವರ ಭಾಷಣದಲ್ಲಿ ಬೆಳಕು ಚೆಲ್ಲುವಂತಾಗಬೇಕು. ಆ ನಿಟ್ಟಿನಲ್ಲಿ ಭಾಷಣ ಸಿದ್ಧಪಡಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಕ್ರೀಡಾಂಗಣ ಸ್ವಚ್ಚತೆ ಹಾಗೂ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ, ಕ್ರೀಡಾಂಗಣವನ್ನು ಒಂದು ವಾರಕ್ಕೆ ಮೊದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಪೂರ್ವಾಭ್ಯಾಸ ಹಾಗೂ ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚಿಸಿದರು.
ಗಣರಾಜ್ಯೋತ್ಸವ ದಿನದಂದು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಈಗಾಗಲೇ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ದಮಯಂತಿ ಅವರು ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್ ಅವರು ಗಣರಾಜ್ಯೋತ್ಸವ ಆಚರಣೆ ಸಂಬಂಧ ಹಲವು ಮಾಹಿತಿ ನೀಡಿದರು.
ಜಿ.ಪಂ.ಉಪಕಾರ್ಯದರ್ಶಿ ಧನರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ಜಿಲ್ಲಾ ಖಜಾನಾಧಿಕಾರಿ ಬಿ.ಎನ್.ರಘುನಾಥ್, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಅನಿತಾ ಭಾಸ್ಕರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.