ಮಡಿಕೇರಿ ಜ.13 : ಸಾರ್ವಜನಿಕರಿಂದ ದೂರು ಬರದಂತೆ ಗಮನಹರಿಸುವುದು ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದು ಲೋಕಾಯುಕ್ತ ಡಿವೈಎಸ್ಪಿ ವಿ.ಕೃಷ್ಣಯ್ಯ ಅವರು ಸಲಹೆ ನೀಡಿದರು.
ನಗರದ ತಹಶೀಲ್ದಾರ್ ಅವರ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಕಾನೂನು ಬದ್ಧವಾಗಿ ಸರ್ಕಾರದ ನಿಯಮಾನುಸಾರ ಕೆಲಸಗಳನ್ನು ಮಾಡಬೇಕು. ಸಾರ್ವಜನಿಕರ ಕೆಲಸ ಆಗದಿರುವುದಕ್ಕೆ ಹಿಂಬರಹ ನೀಡಬೇಕು. ಸಾರ್ವಜನಿಕರಿಂದ ದೂರುಗಳು ಬಂದಾಗ ತಕ್ಷಣವೇ ಸ್ಪಂದಿಸಬೇಕು ಎಂದು ಹೇಳಿದರು.
ಸಾರ್ವಜನಿಕರು ಮಾಹಿತಿ ಕೇಳಿದಾಗ ಮಾಹಿತಿ ನೀಡುವುದು ಮೊದಲ ಆದ್ಯತೆ ಆಗಬೇಕು. ಮಾಹಿತಿ ನೀಡದೆ ಶತಾಯಿಸುವುದು ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ. ಆದ್ದರಿಂದ ಯಾವುದೇ ಪತ್ರಕ್ಕೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರತಿವರ್ಷ ಆಸ್ತಿದಾಯಕ ಪಟ್ಟಿ ಸಲ್ಲಿಸಬೇಕು. ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿವರದ ನಾಮಫಲಕ ಅಳವಡಿಸಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಅವರು ನಿರ್ದೇಶನ ನೀಡಿದರು.
ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಖಲಾತಿಗಳನ್ನು ಕ್ರಮಬದ್ಧವಾಗಿ ಇಟ್ಟುಕೊಳ್ಳಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದು ವಿ.ಕೃಷ್ಣಯ್ಯ ಅವರು ಸೂಚಿಸಿದರು.
ಲೋಕಾಯುಕ್ತ ಇನ್ಸ್ಪೆಕ್ಟರ್ ಲೋಕೇಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಸರಿಯಾಗಿ ನಿರ್ವಹಣೆ ಮಾಡದ ಕೆಲವು ‘ಹೋಂ ಸ್ಟೇಗಳಿಗೂ’ ಪರವಾನಗಿ ನೀಡಲಾಗಿದೆ. ಈ ಸಂಬಂಧ ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು.
‘ಜಿಲ್ಲೆಯಲ್ಲಿ ದೊಡ್ಡ ದೊಡ್ಡ ಶ್ರೀಮಂತರು ಸಹ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಅರ್ಹ ಬಡವರಿಗೆ ಬಿಪಿಎಲ್ ಪಡಿತರ ಚೀಟಿ ತಲುಪಿಸಬೇಕು ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ಲೋಕೇಶ್ ಅವರು ಸಲಹೆ ಮಾಡಿದರು.
ಕಂದಾಯ ನಿಗಧಿ, ಭೂಮಿಗೆ ಸಂಬಂಧಿಸಿದ ದಾಖಲೆ ಒದಗಿಸುವುದು. ರಸ್ತೆ ನಿರ್ಮಾಣಕ್ಕೆ ಜಾಗ ಬಿಡಿಸುವುದು ಮತ್ತಿತರ ವಿಚಾರಗಳ ಕುರಿತು ಅರ್ಜಿಗಳು ಸಲ್ಲಿಕೆಯಾದವು. ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ಕಂದಾಯ ಇಲಾಖೆ ದೂರುಗಳಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*