ಮಡಿಕೇರಿ ಜ.13 : ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿಯ ಸಭೆಯು ಜ.28 ರಂದು ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಶುಲ್ಕ ರೂ.501, ಭಾವಚಿತ್ರ-3, ಆಧಾರ್ ಕಾರ್ಡ್ ಪ್ರತಿ ಹಾಗೂ ಯುಡಿಐಡಿ ಕಾರ್ಡಿನೊಂದಿಗೆ ಸಭೆಗೆ ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘ ಕೋರಿದೆ. ಹೆಚ್ಚಿನ ಮಾಹಿತಿಗೆ 934240252 ಸಂಪರ್ಕಿಸಬಹುದಾಗಿದೆ.









