ಕುಶಾಲನಗರ ಜ.15 : ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗ್ರಾ.ಪಂ ನ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದರು.
ಕೂಡುಮಂಗಳೂರು ಗ್ರಾ.ಪಂ ನ ಆರು ಪೌರಕಾರ್ಮಿಕರಿಗೆ ಹಾಗೂ ಈ ಹಿಂದೆ ಮರಣ ಹೊಂದಿದ್ದ ಶಂಕರ್ ಹಾಗೂ ರಂಗರವರ ಕುಟುಂಬಕ್ಕೆ ಆಹಾರ ಕಿಟ್ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಜನ್ಮ ದಿನಾಚರಣೆ ಎಂಬುದು ಸದಾ ನೆನಪಿನಲ್ಲಿರಬೇಕು. ಈ ದೃಷ್ಟಿಯಿಂದ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ತಮ್ಮ ಪಂಚಾಯಿತಿಯ ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡುವ ಮೂಲಕ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ ಎಂದರು.
ಹಿರಿಯ ಪತ್ರಕರ್ತರಾದ ಕೆ.ಕೆ.ನಾಗರಾಜ್ ಶೆಟ್ಟಿ ಮಾತನಾಡಿ, ಜನ್ಮ ದಿನದಂದು ಮೋಜು ಮಸ್ತಿ ಮಾಡಿ ಹಣವನ್ನು ಪೋಲು ಮಾಡುತ್ತಾರೆ. ಆದರೆ ಸ್ನೇಹಿತರು ಹಾಗೂ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡಿ ಜನ್ಮ ದಿನವನ್ನು ಆಚರಣೆ ಮಾಡಿರುವುದು ಸಂತಸದ ವಿಷಯ ಎಂದರು.
ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕರಾದ ಟಿ.ಆರ್.ಪ್ರಭುದೇವ್ ಮಾತನಾಡಿ, ಕೆ.ಬಿ.ಶಂಶುದ್ಧೀನ್ ಅವರು ಬಹಳಷ್ಟು ಸಮಾಜಮಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಜನ್ಮ ದಿನದ ಪ್ರಯುಕ್ತ ಇಡೀ ಗ್ರಾ.ಪಂ ಯನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡುವ ಮೂಲಕ ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ ಎಂದರು.
ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಜನ್ಮ ದಿನದಂದು ಎಲ್ಲರೂ ಸಂತೋಷದಿಂದ ಇರುತ್ತಾರೆ. ಶುಭದಿನದಂದು ಒಳ್ಳೆಯ ಕೆಲಸವನ್ನು ಮಾಡಬೇಕು ಎಂಬ ಉದ್ದೇಶದಿಂದ ಪಂಚಾಯಿತಿಯ ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡಲಾಗಿದೆ. ನಮ್ಮ ಗ್ರಾ.ಪಂ ಯನ್ನು ಸ್ವಚ್ಚಗೊಳಿಸುವ ಪೌರಕಾರ್ಮಿಕರೊಡನೆ ಜನ್ಮ ದಿನವನ್ನು ಆಚರಣೆ ಮಾಡಿರುವುದು ಬಹಳ ಸಂತೋಷವಾಗುತ್ತಿದೆ ಎಂದರು.
ಪೌರಕಾರ್ಮಿಕ ನಾಗರಾಜ್ ಮಾತನಾಡಿ, ನಮ್ಮ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ತಮ್ಮ ಹುಟ್ಟು ಹಬ್ಬವನ್ನು ಪೌರಕಾರ್ಮಿಕರೊಡಣೆ ಆಚರಣೆ ಮಾಡುತ್ತಿರುವುದು ಸಂತೋಷದ ಸಂಗತಿ. ಅಲ್ಲದೇ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಅವರ ಒಳ್ಳೆಯ ಮನಸ್ಸಿಗೆ ದೇವರು ಆಯುಷ್ಯಾರೋಗ್ಯ ನೀಡಲಿ ಎಂದರು.
ಈ ಸಂದರ್ಭ ಪತ್ರಕರ್ತರಾದ ಎಚ್.ಸಿ.ಜಯಪ್ರಕಾಶ್, ಮುಸ್ತಫಾ, ವಿನೋದ್, ಇಸ್ಮಾಯಿಲ್, ಕಾಂಗ್ರೆಸ್ ಯುವ ಮುಖಂಡ ಆದಂ.ಎಸ್, ಉದ್ಯಮಿ ನರೇಂದ್ರ, ಪೌರಕಾರ್ಮಿಕರು ಹಾಗೂ ಸ್ಥಳೀಯರು ಇದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*