ನಾಪೋಕ್ಲು ಜ.13 : ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಪೋಕ್ಲು, ಹಳೆ ವಿದ್ಯಾರ್ಥಿಗಳ ಸಂಘ, ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.
ನಿವೃತ ಪ್ರಾಂಶುಪಾಲರು ಪ್ರೋ.ಕಾಂಡಂಡ ಉಷಾ ಜೋಯಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಬಾಲ್ಯ ಚಿಕಾಗೋ ಭಾಷಣದ ಬಗ್ಗೆ ವಿವರಣೆಯನ್ನು ನೀಡಿ, ವಿವೇಕಾನಂದ ಹಾಗೂ ಪುಣ್ಯ ಪುರುಷರ ಆದರ್ಶ ಅವರನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಎನ್.ಬಿ.ದಿಲೀಶ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸೇವೆ ವಿಷಯದ ಕುರಿತಾಗಿ ಮಾತನಾಡಿದರು.
ಸ್ವಾಮಿ ವಿವೇಕಾನಂದರ ಸೇವಾ ಜೀವನದ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ, ಗುರುವಿನ ಗುಲಾಮ ನಾಗು ಶಿಕ್ಷಣವನ್ನು ತಪಸ್ಸಿನಂತೆ ಆಚರಿಸು ಜೊತೆಗೆ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು,
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕಾವೇರಿ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯ ಗುಣಮಟ್ಟ ಭರವಸೆಯ ಕೋಶ ಸಂಯೋಜಕ ಎಚ್.ಎಸ್ ನಂದೀಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್, ಭೋಧಕವೃಂದ, ವಿದ್ಯಾರ್ಥಿಗಳು , ಶೌರ್ಯ ಸದಸ್ಯರುಗಳು ಹಾಜರಿದ್ದರು .
ವರದಿ : ದುಗ್ಗಳ ಸದಾನಂದ