ಮಡಿಕೇರಿ ಜ.13 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜ.25 ಗುರುವಾರದಂದು ಸಿಎಂ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.









