ಮಡಿಕೇರಿ ಜ.13 : ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ವಿರಾಜಪೇಟೆ ನಗರದಲ್ಲಿ “ಮಾದಕ ವಸ್ತು-ದ್ರವ್ಯಗಳ ನಿರ್ಮೂಲನೆ’ ಕುರಿತು ಜನಜಾಗೃತಿ ಜಾಥಾ ನಡೆಯಿತು.
ಜಾಥಾಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿ, ಯುವ ಜನತೆ ದುಶ್ಚಟಗಳಿಂದ ದೂರ ಇದ್ದು, ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯವರು, ವಿರಾಜಪೇಟೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೋಟರಿ ಕ್ಲಬ್, ಡೆಂಟಲ್ ಕಾಲೇಜು, ಆಟೋ ಚಾಲಕರು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪ್ರಮುಖರು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡು ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿದರು.