ನಾಪೋಕ್ಲು ಜ.14 : ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಎ.ಹಾರಿಸ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು 2 ವರ್ಷಗಳ ಹಿಂದೆ ನನ್ನನ್ನು ಶಾಲೆಯ ಪೋಷಕರು ಸರ್ವಾನುಮತದಿಂದ ಅವಿರೋಧವಾಗಿ ಸಮಿತಿಗೆ ಆಯ್ಕೆ ಮಾಡಿದ್ದರು. ನನ್ನ ಅವಧಿಯಲ್ಲಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ಶ್ರಮಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದು ಹೇಳಿದ್ದಾರೆ.










