ಮಡಿಕೇರಿ ಜ.14 : ಕೊಡಗು ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ ಕಾಫಿ ಬೆಳೆ ನಷ್ಟವಾಗಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಕಾಫಿ ಮಂಡಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗ ವಿರಾಜಪೇಟೆಯಲ್ಲಿ ಶಾಸಕರನ್ನು ಭೇಟಿಯಾಗಿ ಅಕಾಲಿಕ ಮಳೆಯಿಂದ ಉಂಟಾದ ಅಪಾರ ನಷ್ಟದ ಕುರಿತು ಮನವಿ ಪತ್ರದ ಮೂಲಕ ಮನವರಿಕೆ ಮಾಡಿದರು.
ಈ ಸಂದರ್ಭ ಮಾತನಾಡಿದ ಪೊನ್ನಣ್ಣ ನಷ್ಟದ ಸಮೀಕ್ಷೆ ಬಗ್ಗೆ ಭರವಸೆ ನೀಡಿದರು.
ಕಾಪಿ ಕೇಂದ್ರ ಸರಕಾರದ ವಾಣಿಜ್ಯ ಸಚಿವಾಲಯದಡಿಯಲ್ಲಿ ಬರುತ್ತಿದ್ದು, ಅಕಾಲಿಕ ಮಳೆಯಿಂದ ಉಂಟಾಗಿರುವ ಕಾಫಿ ಬೆಳೆಗಾರರ ಸಂಕಷ್ಟವನ್ನು ಕೇಂದ್ರವೇ ಪರಿಗಣನೆ ಮಾಡಬೇಕಾಗಿದೆ ಎಂದರು.
::: ಜಿಲ್ಲಾಧಿಕಾರಿಗಳಿಗೆ ಮನವಿ :::
ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಬೆಳೆ ನಷ್ಟದ ಬಗ್ಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿತು.
ಕಳೆದ ಮಳೆಗಾಲದಲ್ಲಿ ಕೊಳೆರೋಗಕ್ಕೆ ತುತ್ತಾದ ಕಾಫಿ ಬೆಳೆಯ ನಷ್ಟದ ಸಮೀಕ್ಷೆ ನಡೆಸಲು ಕಾಫಿ ಮಂಡಳಿಗೆ ಸೂಚಿಸಲಾಗಿತ್ತು ಎಂದು ತಿಳಿಸಿದ ಜಿಲ್ಲಾಧಿಕಾರಿ, ಈಗ ಅಕಾಲಿಕ ಮಳೆಯಿಂದ ಉಂಟಾಗಿರುವ ನಷ್ಟದ ಸಮೀಕ್ಷೆಗೂ ಕ್ರಮ ಕೈಗೊಳ್ಳುವಂತೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು.
::: ಪರಿಹಾರ ಪರಿಷ್ಕರಣೆಗೆ ಮನವಿ :::
ಕಾಫಿ ಬೆಳೆ ನಷ್ಟಕ್ಕೆ ಎನ್.ಡಿ.ಆರ್.ಎಫ್ ಮಾನದಂಡದ ಮೂಲಕ ನೀಡುವ ಪರಿಹಾರವನ್ನು ದಶಕಗಳಿಂದ ಪರಿಷ್ಕರಣೆ ಮಾಡಿಲ್ಲ. 2020ರಲ್ಲಿ ಜಿಲ್ಲೆಯ ಪ್ರಾಕೃತಿಕ ವಿಕೋಪ ಅಧ್ಯಯನ ತಂಡ ಆಗಮಿಸಿದ ಸಂದರ್ಭ ಬೆಳೆಗಾರರ ಒಕ್ಕೂಟ ನೀಡಿದ ಮನವಿಗೆ ಸ್ಪಂದಿಸಿ ಈಗ ಇರುವ ಪರಿಹಾರ ಹೆಕ್ಟೇರ್ ಗೆ ರೂ.18 ಸಾವಿರದಿಂದ ರೂ.50 ಸಾವಿರಕ್ಕೆ ಪರಿಷ್ಕರಣೆ ಮಾಡಲಾಗಿತ್ತು. ಈಗ ಇರುವ 2 ಹೆಕ್ಟೇರ್ ಗರಿಷ್ಠ ಮಿತಿಯನ್ನು 5 ಹೆಕ್ಟೇರಿಗೆ ಹೆಚ್ಚಿಸಲು ಕೇಂದ್ರ ವಾಣಿಜ್ಯ ಸಚಿವಾಲಯಕ್ಕೆ ಶಿಫಾರಸು ಮಾಡಿದ್ದು, ಇದನ್ನು ಜಾರಿಗೆ ತರಬೇಕು ಎಂದು ಮನವಿ ಪತ್ರದ ಮೂಲಕ ಒಕ್ಕೂಟದ ಪ್ರಮುಖರು ಗಮನ ಸೆಳೆದರು.
ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಕೇಚಂಡ ಕುಶಾಲಪ್ಪ, ಕಾರ್ಯದರ್ಶಿ ಅಣ್ಣೀರ ಹರೀಶ್ ಮಾದಪ್ಪ, ಖಜಾಂಚಿ ಮಾಣೀರ ವಿಜಯ ನಂಜಪ್ಪ, ಸ್ಥಾಪಕ ಸದಸ್ಯ ಮಾಣೀರ ಮುತ್ತಪ್ಪ, ಸದಸ್ಯರಾದ ಕೋಳೆರ ಭಾರತಿ, ಬಲ್ಯಮೀದೇರೀರ ಶರಣ್ ಚಂಗಪ್ಪ, ಬಲ್ಯಮೀದೇರೀರ ಸಂಪತ್ ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರೀರ ನವೀನ್ ನಿಯೋಗದಲ್ಲಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*