ಮಡಿಕೇರಿ ಜ.14 : ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಹುಲ್ಲು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರಪೇಟೆ ಸಮೀಪ ಯಡೂರು ಗ್ರಾಮದ ಮಾರಿಗುಡಿ ಜಂಕ್ಷನ್ ನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕುಂದಳ್ಳಿ ಗ್ರಾಮದ ಪ್ರವೀಣ್ ಎಂಬುವವರು ತಮ್ಮ ಟ್ರ್ಯಾಕ್ಟರ್ ನಲ್ಲಿ ಬಸವನಕಟ್ಟೆಯಿಂದ ಹುಲ್ಲನ್ನು ತುಂಬಿಸಿ, ತೆರಳುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಗೊಂಡು ಬೆಂಕಿ ಕಾಣಿಸಿಕೊಂಡಿತು. ಹುಲ್ಲು ಸಂಪೂರ್ಣ ನಾಶವಾಗಿದ್ದು, ಬೇರೆ ಯಾವುದೇ ಅನಾಹುತ ಸಂಭವಿಸಿಲ್ಲ.










