ಮಡಿಕೇರಿ ಜ.15 : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 32ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮದಿನಾಚರಣೆಯು ಜ.23 ರಂದು ನಡೆಯಲಿದೆ.
ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 9 ಗಂಟೆಗೆ ತಾಳತ್ತಮನೆಯ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ಮಕ್ಕಳ ಮ್ಯಾರಾಥಾನ್ ಸ್ಪರ್ಧೆಗಳು ನಡೆಯಲಿದೆ.
ಭಾಗವಹಿಸುವ ಕ್ರೀಡಾಪಟುಗಳು ಜ.22ರ ಒಳಗೆ 9480251938, 8431168783, 8762066118, 6361059178 ಸಂಪರ್ಕಿಬಹುದಾಗಿದೆ ಎಂದು ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









