ನಾಪೋಕ್ಲು ಜ.13 : ಅಪಾಯದ ಹಂತದಲ್ಲಿದದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಹಾಗೂ ಮೋರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಕ್ಕಬ್ಬೆ ಪಟ್ಟಣದಿಂದ ದೇವಾಲಯಕ್ಕೆ ತೆರಳುವ ರಸ್ತೆಯ ಮುಖದ್ವಾರದ ಸಮೀಪ ಸುಮಾರು 200 ಮೀ ರಸ್ತೆ ತೀವ್ರ ಹದಗೆಟ್ಟಿದ್ದು ಮಾತ್ರವಲ್ಲದೆ ರಸ್ತೆಯಲ್ಲಿರುವ ಹಳೆಯ ಮೋರಿಯ ಮಧ್ಯದಲ್ಲಿ ಕುಸಿದಿರುವುದರಿಂದ ಕಕ್ಕಬ್ಬೆ ಪಾಡಿ ಶ್ರೀ ಇತ್ತಪ್ಪ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಬಾಚಮಂಡ ಲವ ಚಿನ್ನಪ್ಪ ಶಾಸಕರ ಗಮನಕ್ಕೆ ತಂದಿದ್ದರು.
ಇವರ ಮನವಿಯನ್ನು ಪರಿಗಣಿಸಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಹಾಗೂ ಮೋರಿಯನ್ನು ವೀಕ್ಷಿಸಿದ ಶಾಸಕರು, ರಸ್ತೆ ಹಾಗೂ ಮೋರಿಯನ್ನು ದುರಸ್ತಿ ಪಡಿಸಿ ಕೊಡುವ ಭರವಸೆಯನ್ನು ನೀಡಿದರು. ಅಲ್ಲದೇ ಸ್ಥಳದಲ್ಲೇ ಲೋಕೋಪಯೋಗಿ ಇಲಾಖೆಯ ಅಭಿಯಂತರಿಗೆ ಕರೆ ಮಾಡಿ ತಕ್ಷಣವೇ ರಸ್ತೆ ಹಾಗೂ ಮೋರಿ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ನಾಪೋಕ್ಲು ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಬೋಳ್ಳಂಡ ಶರೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ