ಮಡಿಕೇರಿ ಜ.15 : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಸಮಿತಿಯ ಪದಾಧಿಕಾರಿಗಳ ಸಭೆ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಳು ಸಮ್ಮೇಳನ ನಡೆಸುವ ಕುರಿತು ಒಮ್ಮತ್ತದ ನಿರ್ಧಾರ ಕೈಗೊಳ್ಳಲಾಯಿತು.
ಕೊಡಗು ಜಿಲ್ಲೆಯಲ್ಲಿ ತುಳುಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಒಂದೇ ವೇದಿಕೆಯಡಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿ ತುಳು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ತುಳುಭಾಷಿಕ ಸಮುದಾಯದ ಮುಖಂಡರುಗಳು ಹಾಗೂ ತುಳು ಭಾಷಿಕ ಜನಾಂಗ ಬಾಂಧವರು ಸಮ್ಮೇಳನದಲ್ಲಿ ತೊಡಗಿಸಿಕೊಳ್ಳುವಂತೆ ಬಿ.ಬಿ.ಐತ್ತಪ್ಪ ರೈ ಮನವಿ ಮಾಡಿದರು.
ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತು ವಿಚಾರಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ತುಳು ನಾಡಿನ ಸಂಸ್ಕೃತಿ ಬಿಂಬಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆಯನ್ನು ಆಕರ್ಷಣೀಯಗೊಳಿಸಬೇಕು. ತುಳುನಾಡಿನ ಪ್ರಸಿದ್ಧ ಕಲಾವಿದರುಗಳನ್ನು ಆಹ್ವಾನಿಸುವ ಮೂಲಕ ಸಮ್ಮೇಳನವನ್ನು ವರ್ಣರಂಜಿತಗೊಳಿಸಬೇಕು. ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತುಳುಭಾಷಿಕ ಸಮುದಾಯದ ಪ್ರಮುಖರ ಮತ್ತು ಜಿಲ್ಲೆಯ ತುಳುಕೂಟದ ಪದಾಧಿಕಾರಿಗಳ ಸಭೆ ನಡೆಸಿ ಸಮಾಲೋಚನೆ ಮಾಡಬೇಕು. ಮುಂದಿನ ಸಭೆಯಲ್ಲಿ ಸಮ್ಮೇಳನದ ಯಶಸ್ಸಿಗಾಗಿ ವಿವಿಧ ಉಪ ಸಮಿತಿಗಳನ್ನು ರಚಿಸಲು ಸಭೆ ನಿರ್ಧಾರ ಕೈಗೊಂಡಿತು.
ತುಳುವೆರ ಜನಪದ ಕೂಟದ ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದ ರಘು, ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ, ಸಂಘಟನಾ ಕಾರ್ಯದರ್ಶಿ ರಾಜೀವ್ ಲೋಚನ, ಖಜಾಂಚಿ ಪ್ರಭು ರೈ, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಕೆ.ಜಿ.ರಾಮಕೃಷ್ಣ, ಮಡಿಕೇರಿ ತಾಲ್ಲೂಕು ಸಂಚಾಲಕ ಪ್ರಸಾದ್ ಬಿಳಿಗೇರಿ, ಸದಸ್ಯರುಗಳಾದ ಸಂಧ್ಯಾ ಗಣೇಶ್ ರೈ, ಲೀಲಾ ಶೇಷಮ್ಮ, ಕವಿತಾ ಕುಂದರ್, ಬಿ.ಎಸ್.ಜಯಪ್ಪ, ಕೆ.ಆರ್.ವಿಜಯ, ಜಗದೀಶ್ ಆಚಾರ್ಯ, ಗಿರೀಶ್ ರೈ, ಚಂದ್ರಶೇಖರ್ ಕುಲಾಲ್, ಸಾವಿತ್ರಿ, ಪ್ರಕಾಶ್ ಆಚಾರ್ಯ, ಅಶೋಕ ಆಚಾರ್ಯ, ಸುಧೀರ್, ಬಿ.ಎಸ್.ಪುರುಷೊತ್ತಮ ಸೇರಿದಂತೆ ಅನೇಕರು ಸಭೆಯಲ್ಲಿ ಉಪಸ್ಥಿತರಿದ್ದರು. ಪಿ.ಎಂ.ರವಿ ನಿರೂಪಿಸಿ, ಬಿ.ಎಸ್.ಜಯಪ್ಪ ವಂದಿಸಿದರು.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*