ಮಡಿಕೇರಿ ಜ.15 : ಹುಲಿದಾಳಿಗೆ ಹಸು ಬಲಿಯಾದ ಘಟನೆ ಪೊನ್ನಂಪೇಟೆ ತಾಲ್ಲೂಕು ಬೆಸಗೂರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಕೋಳೆರ ರಘ ಸೋಮಯ್ಯ ಅವರಿಗೆ ಸೇರಿದ ಹಸು ಇದಾಗಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಗ್ರಾಮದಲ್ಲಿ ಆತಂಕ ಮೂಡಿಸಿರುವ ಹುಲಿಯನ್ನು ತಕ್ಷಣ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.








